ತುಮಕೂರು –
ತ್ರೀಬಲ್ ರೈಡ್ ಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಬಲಿಯಾದ ಘಟನೆ ತುಮಕೂರಿನಲ್ಲಿ ನಡೆದಿದೆ.ಒಂದೇ ಬೈಕ್ ನಲ್ಲಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ಮೂವರು ವಿದ್ಯಾರ್ಥಿಗಳು.ಕುಣಿಗಲ್ ತಾಲ್ಲೂಕಿನ ಜಿನ್ನಾಗರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.

ನವೀನ್(16) ಸ್ಥಳದಲ್ಲೇ ಮೃತಪಟ್ಟ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಯಾಗಿದ್ದು ಬೈಕ್ ನಲ್ಲಿದ್ದ ಶರತ್,ದರ್ಶನ್ ಗೆ ಗಾಯ ಗಳಾಗಿದ್ದು ಇಬ್ಬರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ತೆರಳು ತ್ತಿದ್ದ ಮೂವರು.ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಈ ಒಂದು ಘಟನೆ ನಡೆದಿದೆ. ಡಾ.ರಾಜೇಂದ್ರ ಪ್ರಸಾದ್ ಹೈಸ್ಕೂಲ್ ನ ವಿದ್ಯಾರ್ಥಿಗಳಾಗಿದ್ದಾರೆ. ಅಮೃತ್ತೂ ರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ