ಧಾರವಾಡದಲ್ಲಿ ಪೊಲೀಸರ ವಿರುದ್ದ ಸಿಡಿದೆದ್ದ ಬಿಜೆಪಿ ಯವರು ಲಾಠಿ ಚಾರ್ಜ್ ಗೆ ಖಂಡನೆ ಎಸಿಪಿ ವಿರುದ್ದ ಹೋರಾಟ…..

Suddi Sante Desk

ಧಾರವಾಡ –

ನಿನ್ನೆ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ಗಲಾಟೆ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಬಿಜೆಪಿ ಕಾರ್ಯ ಕರ್ತರು ಮುಖಂಡರು ಪೊಲೀಸರ ವಿರುದ್ದ ಪ್ರತಿಭಟನೆ ಮಾಡಿದರು.ಏಳು ದಿನಗಳ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಬೀಸಿದ್ದರು ಎಸಿಪಿ ಅನುಷಾ.

ಇದನ್ನು ಪ್ರಶ್ನೆ ಮಾಡಲು ಬಂದಿದ್ದ ಪಾಲಿಕೆಯ ವಾರ್ಡ್ 8 ರ ಸದಸ್ಯ ಶಂಕರ ಶೇಳಕೆ ಅವರ ಮೇಲೂ ಲಾಠಿ ಬೀಸಿದ್ದರು.ಸಾಲದಂತೆ ಈಗಾಗಲೇ ನಾಲ್ಕು ಜನರನ್ನು ಪೊಲೀಸರು ಬಂಧನ ಮಾಡಿದ್ದರು.ಓಂಕಾರ ರಾಯಚೂರು, ಶ್ರೀನಿವಾಸ ಪಾಟೀಲ್, ಮಹಾಂತೇಶ್ ಉಳ್ಳಾಗಡ್ಡಿ ಬಂಧನ ಮಾಡಿದ್ದರು.

ತಡರಾತ್ರಿ ವರೆಗೂ ಪೊಲೀಸರ ವಿರುದ್ದ ಪ್ರತಿಭಟನೆ ಮಾಡಿದ್ದರು. ಒಂದು ಕಡೆ ಬಿಜೆಪಿ ಕಾರ್ಯಕರ್ತರನ್ನು ಬಂಧನ ಮತ್ತೊಂದು ಕಡೆಗೆ ಲಾಠಿ ಚಾರ್ಜ್ ಖಂಡಿಸಿ ಶಹರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಮಾಡಿ ದರು.ಧಾರವಾಡ ಶಹರ ಠಾಣೆ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಮಾಡಿ ಆಕ್ರೋಶವನ್ನು ವ್ಯಕ್ತಪಡಿಸಿದರು.ಪೊಲೀಸರ ದೌರ್ಜನ್ಯ ಖಂಡಿಸಿ ದಿಕ್ಕಾರ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಒಂದು ಪ್ರತಿಭಟನೆಯಲ್ಲಿ ಪಾಲಿಕೆಯ ಸದಸ್ಯರು ಪಕ್ಷದ ಕಾರ್ಯಕರ್ತರು ಮುಖಂಡರು ಸೇರಿದಂತೆ ಹಲವರು ಭಾಗವಹಿಸಿದ್ದು ಪೊಲೀಸರ ವಿರುದ್ದ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿ ಲಾಠಿ ಚಾರ್ಜ್ ಮಾಡಿರುವ ಎಸಿಪಿ ಮೇಲೆ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.