ದಾವಣಗೆರೆ –
ಒಂದೆಡೆ ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ವಸೂಲಿ ಮಾಡುತ್ತಿದ್ದು, ಮತ್ತೊಂದೆಡೆ ಎಲ್ಲಾ ಖಾತೆಗಳನ್ನು ಬಸವರಾಜ ಬೊಮ್ಮಾಯಿ ಅವರಿಗೆ ಕೊಡುತ್ತಿದ್ದರೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿ ಮುಂದುವರೆಯಲು ಅಸಾಧ್ಯ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಮಾತನಾಡಿದ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ನನ್ನನ್ನು ಕೈಬಿಟ್ಟರೆ ವೀರಶೈವ ಲಿಂಗಾಯಿತರು ದೂರವಾಗುತ್ತಾರೆ ಎಂದು ಬಿಜೆಪಿ ಹೈಕಮಾಂಡ್ ಗೆ ಯಡಿಯೂರಪ್ಪ ಹೆದುರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಶಾಸಕರು ಮುಖ್ಯಮಂತ್ರಿ ಬಳಿ ಹೋದರೆ ಅನುದಾನ ಇಲ್ಲ ಎನ್ನುತ್ತಾರೆ. ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ರಚನೆ ಮಾಡಿ ನಿಗಮ ರಚಿಸುವಾಗ 500 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದೀರಿ.ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ.

ಇನ್ನೆಲ್ಲಿಂದ ಕೊಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಸಿಎಂ ಯಡಿಯೂರಪ್ಪ ಎಲ್ಲರಿಗೂ ಮೋಸ ಮಾಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.