ಬೆಂಗಳೂರು –
ಒತ್ತೆಯಲ್ಲಿಟ್ಟುಕೊಂಡಿರುವ ಸಂತ್ರಸ್ತೆಯನ್ನು ಬಿಟ್ಟುಬಿಡಿ, ತನಿಖೆಗೆ ಸಹಕರಿಸಿ ಅಂತ ರಾಜ್ಯ ಬಿಜೆಪಿ ಘಟಕ ಒತ್ತಾಯ ಮಾಡಿದೆ. ನಮ್ಮ ಮಗಳನ್ನು ಡಿಕೆ ಶಿವಕುಮಾರ್ ಒತ್ತೆಯಾಳಾಗಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಅಂಥ ಸಿಡಿ ಲೇಡಿ ಪೋಷಕರು ಗಂಭೀರ ಆರೋಪ ಮಾಡಿದ ಬೆನ್ನಲೇ ಬಿಜೆಪಿ ರಾಜ್ಯ ಘಟಕ ಟ್ವಿಟ್ ಮಾಡಿದೆ.
ಇದೇ ವೇಳೆ ಇನ್ನೊಂದು ಟ್ವಿಟ್ ನಲ್ಲಿ ಮಹಾ ನಾಯಕ ಡಿ.ಕೆ ಶಿವಕುಮಾರ್ ಅವರೇ, ನಿಮಗೆ ಸ್ವಲ್ಪವಾದರೂ ನೈತಿಕತೆ ಇದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟುಬಿಡಿ. ಎಲ್ಲವನ್ನೂ ತಾನೇ ಮುಂದೆ ನಿಂತು ಮಾಡಿಸುತ್ತಾರೆ, ಸದನದಲ್ಲಿ ಬೊಬ್ಬಿರಿಯುತ್ತಾರೆ, ಸುಭಗನಂತೆ ನಟಿಸುತ್ತಾರೆ ಅಂತ ಕಿಡಿಕಾರಿದೆ.
ರಾಜೀನಾಮೆ ನೀಡಲು ಇನ್ನೆಷ್ಟು ಕಾಲ ಬೇಕು ಮಾನ್ಯ ಶಿವಕುಮಾರ್ ಅವರೇ ನೇರವಾಗಿ ಆರೋಪ ಮಾಡಿದ್ದಾರೆ.ರಾಜಕೀಯ ಲಾಭಕ್ಕಾಗಿ ಸಂತ್ರಸ್ಥೆಯನ್ನು ಬಳಸಿಕೊಂಡ ಆರೋಪ ನಿಮ್ಮ ಮೇಲೆ ಇದೆ.
ಇಷ್ಟೆಲ್ಲಾ ಮಾಡಿಯೂ ಸದನದಲ್ಲಿ ಹೇಗೆ ಮುಖ ಇಟ್ಟುಕೊಂಡು ಸಿಡಿ ವಿಚಾರವಾಗಿ ಮಾತನಾಡಿ ದ್ದೀರಿ? ತಕ್ಷಣವೇ ರಾಜೀನಾಮೆ ನೀಡಿ ಅಂತಾ ಒತ್ತಾಯವನ್ನು ಮಾಡಿದರು.