ಬಾಗಲಕೋಟ –
SSLC ವಿದ್ಯಾರ್ಥಿನಿಯೊಬ್ಬಳು ಶವವಾಗಿ ಪತ್ತೆ ಯಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಜಿಲ್ಲೆಯ ಚಿಕ್ಕಯರನಕೇರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಶಾಲಾಸಮವಸ್ತ್ರದಲ್ಲೇ ಬಾವಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.
ಶನಿವಾರದಿಂದ ನಾಪತ್ತೆಯಾಗಿದ್ದಳು ಈ ಒಂದು ವಿದ್ಯಾರ್ಥಿನಿ ಬೇವಿನಮಟ್ಟಿ ಸರಕಾರಿ ಪ್ರೌಢಶಾಲೆ ಯ ವಿದ್ಯಾರ್ಥಿನಿಯಾಗಿದ್ದಾಳೆ.ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಚಿಕ್ಕಯರನಕೇರಿ ಗ್ರಾಮ ವಾಗಿದೆ.ಕೊಲೆಗೈದು ಬಾವಿಯಲ್ಲಿ ಎಸೆದಿದ್ದಾರೆ ಎಂದು ಪೋಷಕರ ಆರೋಪವನ್ನು ಮಾಡಿದ್ದಾರೆ. ಇನ್ನೂ ವಿಷಯ ತಿಳಿದ ಹುನಗುಂದ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.