ಬೆಂಗಳೂರು –
ಬಿಜೆಪಿ ಸಂಘರ್ಷ ಶಮನದ ಅಖಾಡಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಇಳಿದಿದ್ದಾರೆ ಹೌದು ಈಗಾಗಲೇ ದೆಹಲಿಗೆ ತೆರಳಿರುವ ಅವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರನ್ನು ಬೇಟಿಯಾಗಿದ್ದಾರೆ ಅಲ್ಲದೇ ಹಿರಿಯ ನಾಯಕರ ಜೊತೆ ಸಭೆಯನ್ನು ಕೂಡಾ ಮಾಡಿದರು.
ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಚಾರದಲ್ಲಿ ತೀವ್ರ ಗೊಂಡಿರುವ ಭಿನ್ನಮತವನ್ನು ಶಮನಗೊಳಿಸಲು ಪಕ್ಷದ ವರಿಷ್ಠರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೊಣೆ ನೀಡಲು ಮುಂದಾಗಿದ್ದಾರೆ.
ಪಕ್ಷದ ಹೈಕಮಾಂಡ್ ಕರೆದಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಯಡಿಯೂರಪ್ಪ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇತರೆ ನಾಯಕರೊಂದಿಗೆ ಸಮಾಲೋಚನೆ ನಡೆಸಿ ದ್ದಾರೆ.ಇನ್ನೂ ದೆಹಲಿಯಲ್ಲೇ ಉಳಿದು ಕೊಂಡು ಪೈನಲ್ ಮಾಡಿಕೊಂಡು ತಿರುಗಲಿದ್ದಾರೆ.
ಪಕ್ಷಕ್ಕೆ ಮುಜಗರವನ್ನುಂಟು ಮಾಡುವಂತಹ ಹೇಳಿಕೆ ನೀಡುವಂತಹವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಸೂಚನೆಯನ್ನು ಪಕ್ಷದ ರಾಜ್ಯಾಧ್ಯ ಕ್ಷರು ನೀಡಿದರೂ ಕ್ಯಾರೆ ಎನ್ನುತ್ತಿಲ್ಲ.ಪಕ್ಷದ ಮೇಲೆ ಇನ್ನೂ ಹಿಡಿತ ಹೊಂದಿರುವ ಯಡಿಯೂರಪ್ಪ ಮೂಲಕ ಅಸಮಾಧಾನಗೊಂಡ ನಾಯಕರನ್ನು ಸುಮ್ಮನಿರಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.
ಹೊಸ ಸರ್ಕಾರದ ಮೊದಲ ಅಧಿವೇಶನ ಪ್ರಾರಂಭವಾಗುತ್ತಿದೆ. ಸದನದಲ್ಲಿ ಸರ್ಕಾರದ ವಿರುದ್ಧ ಟೀಕಾ-ಪ್ರಹಾರ ನಡೆಸುವ ಮತ್ತು ಪಕ್ಷವನ್ನು ಸದನದಲ್ಲಿ ಮುನ್ನಡೆಸುವ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಿಲ್ಲ.ಅಲ್ಲದೇ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪಕ್ಷದಲ್ಲಿ ಮಾತುಗಳು ಕೇಳಿಬರುತ್ತಿದ್ದು ಏನೇನಾಗಲಿದೆ ಎಂಬೊದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..