ಹುಬ್ಬಳ್ಳಿ –
ಕಿರೇಸೂರ ಬಳಿ ಬಸ್ ಟ್ರಕ್ ನಡುವೆ ಅಪಘಾತ – ಮುಖಾಮುಖಿ ಡಿಕ್ಕಿಯಾದ ಟ್ರಕ್ ಬಸ್ 15 ಕ್ಕೂ ಹೆಚ್ಚು ಜನರಿಗೆ ಗಾಯ ಆಸ್ಪತ್ರೆಗೆ ದಾಖಲು ತಪ್ಪಿತು ದೊಡ್ಡದೊಂದು ಅವಘಡ ಹೌದು
ಟ್ರಕ್ ಮತ್ತು ಸಾರಿಗೆ ಬಸ್ ವೊಂದು ಮುಖಾ ಮುಖಿ ಡಿಕ್ಕಿಯಾಗಿ ಹದಿನೈದಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನವಲಗುಂದ ತಾಲ್ಲೂಕಿನ ಕಿರೇಸೂರು ಗ್ರಾಮದ ಬಳಿ ನಡೆದಿದೆ.ಹುಬ್ಬಳ್ಳಿ ತಾಲೂಕಿನ ಕುಸುಗಲ್ ಹಾಗೂ ಕಿರೇಸೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಸಾರಿಗೆ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡ ಲಾಗಿದೆ.ಟ್ರಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಎರಡೂ ವಾಹನಗಳು ಜಖಂಗೊಂ ಡಿವೆ.
ಅಪಘಾತದಲ್ಲಿ ಗಾಯಗೊಂಡವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅಪಘತದ ಸುದ್ದಿಯನ್ನು ತಿಳಿದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿದರು.ರಾಷ್ಟ್ರೀಯ ಹೆದ್ದಾರಿ ಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು
ವಾಹನ ಸವಾರರು ಪರದಾಡಿದ ಪರಿಸ್ಥಿತಿ ನಿರ್ಮಾಣವಾಗಿತ್ತು.ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ದೌಡಾಯಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿ ಈ ಕುರಿತಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..