ಕಲಾಪದಲ್ಲಿ ಕುಳಿತು ಅಶ್ಲೀಲ ವಿಡಿಯೋ ನೋಡುವ ಮೂಲಕ

Suddi Sante Desk

ಬೆಂಗಳೂರು –

ಈ ಹಿಂದೆ ಸದಸನಲ್ಲಿ ಕೂತು ಬಿಜೆಪಿಯ ಮೂವರು ಶಾಸಕರು ಬ್ಲೂ ಫಿಲಂ ವೀಕ್ಷಣೆ ಮಾಡಿ ಇಡೀ ದೇಶಾದ್ಯಂತ ಕರ್ನಾಟಕದ ಮಾನ ಮರ್ಯಾದೆ ಯನ್ನ ತೆಗೆದಿದ್ದರು. ಇದು ರಾಜ್ಯದ ಪಾಲಿಗೆ ಕಪ್ಪು ಚುಕ್ಕೆಯಾಗೇ ಉಳಿಕೊಂಡಿದೆ. ಇದೀಗ ಮತ್ತೊಬ್ಬ ಜನಪ್ರತಿನಿಧಿ ಕಲಾಪದಲ್ಲಿ ಕುಳಿತು ಅಶ್ಲೀಲ ವಿಡಿಯೋ ನೋಡುವ ಮೂಲಕ ಸದನದ ಮಾನ ಹರಾಜು ಹಾಕಿದ ಘಟನೆ ಶುಕ್ರವಾರ ಸಂಭವಿಸಿದೆ.

ಇಂದು ವಿಧಾನಪರಿಷತ್ ಕಲಾಪ ನಡೆಯುತ್ತಿತ್ತು. ಕಾಂಗ್ರೆಸ್ Mlc ಪ್ರಕಾಶ್ ರಾಥೋಡ್ ಅವರು ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ದೃಶ್ಯ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇಡೀ ರಾಜ್ಯವನ್ನು ಪ್ರತಿನಿಧಿಸುವ ಶಾಸಕರುಗಳು ಕೂರುವ ಪ್ರಜಾ ದೇಗುಲದಲ್ಲಿ ಇಂತಹ ಅಸಹ್ಯ ವರ್ತನೆ ತೋರಿದ MLC ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ನೈತಿಕತೆಯ ಪ್ರಶ್ನೆಗೆ ಸ್ವತಃ ಆ MLC ಜೊತೆಗೆ ಕಾಂಗ್ರೆಸ್ ಪಕ್ಷದ ಮುಖಂಡರೂ ಸ್ಪಷ್ಟನೆ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.