ರಾಯಚೂರು –
ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ನಿಶ್ಚಿತ ಪಿಂಚಣಿ ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ರಾಯಚೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸರ್ಕಾರಿ ನೌಕರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ 2022ರ ಜುಲೈ ಯಿಂದ 7ನೇ ವೇತನ ಪರಿಷ್ಕರಣೆ ಜಾರಿಗೊಳಿಸ ಬೇಕಾಗಿತ್ತು.ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಅನೇಕ ಹೋರಾಟಗಳು ನಡೆದರೂ ಪ್ರಯೋಜನವಾಗಿಲ್ಲ
7ನೇ ವೇತನ ಆಯೋಗದ ಶಿಫಾರಸುಗಳನ್ನು ಕೂಡಲೇ ಪಡೆದು 1-7-2022ರಿಂದ ಅನ್ವಯ ವಾಗುವಂತೆ ಶೇ 40ರಷ್ಟು ವೇತನ ಹೆಚ್ಚಳವನ್ನು ಜಾರಿಗೊಳಿಸಬೇಕು.ರಾಜ್ಯದಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಆಡಳಿತ ಸುಧಾರಣೆ ನೆಪದಲ್ಲಿ ಶಿಫಾರಸು ಮಾಡ ಲಾಗಿರುವ ಹುದ್ದೆಗಳ ಕಡಿತವನ್ನು ಹಾಗೂ ಸಾರ್ವ ಜನಿಕ ಉದ್ದಿಮೆಗಳ ಖಾಸಗೀಕರಣ ಕೈಬಿಡಬೇಕು ಎಲ್ಲಾ ಇಲಾಖೆಗಳಲ್ಲಿ ನನೆಗುದಿಗೆ ಬಿದ್ದಿರುವ ಸಿ ಮತ್ತು ಆರ್ ಪರಿಷ್ಕರಣೆ, ಜೇಷ್ಠತಾಪಟ್ಟಿ ತಯಾ ರಿಕೆ ಅಂತಿಮಗೊಳಿಸಿ ಮುಂಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.
ಹೊರಗುತ್ತಿಗೆ, ಗುತ್ತಿಗೆ, ದಿನಗೂಲಿ ನೌಕರರಿಗೆ, ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರುಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು,ಎಲ್ಲ ನೇರ ನೇಮಕಾತಿಯಲ್ಲಿ ಅವರಿಗೆ ಪ್ರಾತಿನಿಧ್ಯ ನೀಡ ಬೇಕು ಎಂದು ಒತ್ತಾಯಿಸಿದರು.
ಕೋವಿಡ್ ಸಂದರ್ಭದಲ್ಲಿ ಮುಟ್ಟುಗೋಲು ಹಾಕಿರುವ 18 ತಿಂಗಳ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಬೇಕು ಅನುಕಂಪದ ನೇಮ ಕಾತಿಯಲ್ಲಿ ಇರುವ ನಿರ್ಬಂಧಗಳನ್ನು ಕೈಬಿಡ ಬೇಕು ಎಂಬುವುದು ಸೇರಿದಂತೆ ಅನೇಕ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.
ಈ ಒಂದು ಸಮಯದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ತಾಯಪ್ಪ ಮರ್ಚೆಟ್ಹಾಳ್, ರಾಜ್ಯ ಜಂಟಿ ಕಾರ್ಯದರ್ಶಿ ನಾರಾಯಣ, ಪ್ರಧಾನ ಕಾರ್ಯದರ್ಶಿ ಮೋಹಿನುದ್ದೀನ್, ಪದಾಧಿಕಾರಿಗ ಳಾದ ವರುಣಕುಮಾರ, ನಾಗೇಶ ಇದ್ದರು.
ಸುದ್ದಿ ಸಂತೆ ನ್ಯೂಸ್ ರಾಯಚೂರು…..