ಧಾರವಾಡ –
ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು ಹಾಜರು ಪಡಿಸಿದರು .ಇಂದು ಚಂದ್ರಶೇಖರ ಇಂಡಿ ಅವರನ್ನು ಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಹಾಜರು ಮಾಡಿದರು.
ಧಾರವಾಡದಲ್ಲಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೇ ಸಿಬಿಐ ಅಧಿಕಾರಿಗಳು ಈಗಷ್ಟೇ ಹಾಜರು ಮಾಡಿದ್ದಾರೆ. ಅಕ್ರಮ ಶಸ್ತ್ರಾಸ್ತ ಪೊರೈಕೆ ಆರೋಪದಡಿ ಇವರನ್ನು ಈಗಾಗಲೇ ಸಿಬಿಐ ಅಧಿಕಾರಿಗಳು ವಶಕ್ಕೆ ತಗೆದುಕೊಂಡಿದ್ದಾರೆ.
ಈಗಾಗಲೇ ಇವರನ್ನು ಬಂಧಿಸಿರುವ ಸಿಬಿಐ ಅಧಿಕಾರಿಗಳು ಮತ್ತಷ್ಟು ವಿಚಾರಣೆಗೊಳಪಡಿಸಿ ಈಗಷ್ಟೇ ಕೋರ್ಟ್ ಗೆ ಕರೆದುಕೊಂಡು ಬಂದರು. ಪೊಲೀಸ್ ಭದ್ರತೆಯ ನಡುವೆ ನ್ಯಾಯಾಲಯಕ್ಕೇ ಇವರನ್ನು ಸಿಬಿಐ ಅಧಿಕಾರಿಗಳು ಹಾಜರುಪಡಿಸಿದರು.
ಧಾರವಾಡದ ಸಿಬಿಐ ನ ವಿಶೇಷ ಕೋರ್ಟ್ ಗೆ ಹಾಜರು ಮಾಡಿದ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ಇವರನ್ನು ವಶಕ್ಕೇ ಕೇಳುವ ಸಾಧ್ಯತೆ ಇದೆ. ಇವರಿಂದ ಇನ್ನೂ ಹೆಚ್ಚಿನ ವಿಚಾರಣೆ ಮಾಡುವ ಸಾಧ್ಯತೆ ಇದೆ ಹೀಗಾಗಿ ಅಧಿಕಾರಿಗಳು ತಮ್ಮ ವಶಕ್ಕೆ ನೀಡುವಂತೆ ಕೇಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.