ಬೆಂಗಳೂರು –
ಈ ವರ್ಷವೇ ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿ ವೇತನ ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ CM…..

ಹೌದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು 2022ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರ ನೌಕರರ ಸರಿಸಮನಾಗಿ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲು 7ನೇ ವೇತನ ಆಯೋಗವನ್ನು ರಚನೆ ಮಾಡಲು ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರು ಪ್ರಮುಖ ಕಾರಣರು. ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ ಸರ್ಕಾರಿ ನೌಕರರ ವೇತನದ ತಾರತಮ್ಯವನ್ನು ಸರಿದೂರಿಸಲು ತೀರ್ಮಾನಿಸಲಾಗಿದೆ.ಸರ್ಕಾರಿ ನೌಕರರು ಸಂತೋಷದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ರಾಜ್ಯದ ಜನರಿಗೆ ನ್ಯಾಯ ಒದಗಿಸಲು ಸಾಧ್ಯ ಎಂದು ತಿಳಿಸಿದರು.


ಇನ್ನು ನಾವೆಲ್ಲಾ ಒಂದೇ ಕುಟುಂಬದ ಸದಸ್ಯರಾಗಿದ್ದು, ರಾಜ್ಯವನ್ನು ಉನ್ನತ ಮಟ್ಟಕ್ಕೆ ತರಲು ಒಗ್ಗಾಟ್ಟಾಗಿ ದುಡಿ ಯಬೇಕು.ಆಳುವವರು ಮತ್ತು ಆಡಳಿತಕ್ಕೆ ಸಂಯೋಜ ನಾತ್ಮಕ ಸಂಬಂಧವಾಗಿದ್ದು ಇವೆರಡೂ ಚಕ್ರಗಳು ರಾಜ್ಯದ ಪ್ರಗತಿಯ ರಥವನ್ನು ಮುನ್ನಡೆಸುತ್ತದೆ.ಅಂತಹ ರಾಜ್ಯ ಪ್ರಗತಿಯನ್ನು ಸಾಧಿಸುತ್ತದೆ.ರಾಜ್ಯ ಹಲವಾರು ರಂಗದಲ್ಲಿ ಹೆಸರು ಗಳಿಸಿದ್ದರೆ ಅದರಲ್ಲಿ ಸರ್ಕಾರಿ ನೌಕರರ ಪಾಲು ದೊಡ್ಡದಿದೆ ಎಂದರು.