ನವದೆಹಲಿ –
ಮಹಾಮಾರಿ ಕೊರೊನಾದಿಂದಾಗಿ ತಂದೆ-ತಾಯಿ ಕಳೆದುಕೊಂಡು ಅನಾಥವಾಗಿರಿವ ದೇಶದ ಮಕ್ಕಳ ನೆರವಿಗೆ ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನಿಂತಿದ್ದಾರೆ. ಹೌದು ಆ ಮಕ್ಕಳ ಬೆನ್ನಿಗೆ ಅವರು ನಿಂತುಕೊಂಡಿದ್ದು ಹಲವು ಯೋಜನೆ ಗಳನ್ನು ಘೋಷಣೆ ಮಾಡಿದ್ದಾರೆ. ಮಕ್ಕಳಿಗೆ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಪಿಎಂ ಕೇರ್ಸ್ ನಿಂದ ತಂದೆ ತಾಯಿ, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಘೋಷಣೆ ಮಾಡಿದ್ದಾರೆ
ಸಧ್ಯ ಮಹಾಮಾರಿಯಿಂದಾಗಿ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೊರೋನಾದಿಂದ ಅನೇಕ ಮಕ್ಕಳು ಅನಾಥರಾಗಿದ್ದಾರೆ.ತಂದೆ-ತಾಯಿಯನ್ನು ಕಳೆದು ಕೊಂಡು ದಾರಿ ಕಾಣದೇ ಇರುವ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೊರೋನಾದಿಂದ ಅನಾಥ ರಾದ ಮಕ್ಕಳಿಗೆ ನೆರವಾಗಲು ನಿರ್ಧರಿಸಲಾಗಿದ್ದು ದೇಶದ ಭವಿಷ್ಯ ಪ್ರತಿನಿಧಿಸುವ ಮಕ್ಕಳ ಮತ್ತು ಅವರ ರಕ್ಷಣೆಗಾಗಿ ಉಜ್ವಲ ಭವಿಷ್ಯ ರೂಪಿಸುವುದು ಸರ್ಕಾರದ ಜವಾಬ್ದಾರಿ ಎಂದು ಮೋದಿ ಹೇಳಿದ್ದಾ ರೆ.ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆ ಯಡಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು
ಇನ್ನೂ ಈ ಒಂದು ಯೋಜನೆಯಲ್ಲಿ ಉಚಿತ ಶಿಕ್ಷಣ, ಪ್ರತಿ ತಿಂಗಳು ಆರ್ಥಿಕ ನೆರವು, ಆರೋಗ್ಯ ವಿಮೆ, ಮಕ್ಕಳ ಹೆಸರಲ್ಲಿ ಠೇವಣಿ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದಿದ್ದಾರೆ