ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆ ಯಲ್ಲಿ ಮಧ್ಯ ಮಾರಾಟವನ್ನು ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶವನ್ನು ಮಾಡಿದ್ದಾರೆ.ಹೌದು ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧವನ್ನು ಜಿಲ್ಲಾಧಿಕಾರಿ ಮಾಡಿದ್ದಾರೆ.ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರಿಂದ ಆದೇಶ ಹೊರಬಿದ್ದಿದೆ.
ಮತದಾನ ಹಾಗೂ ಮತಎಣಿಕೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.ಸೆಪ್ಟಂಬರ್ 3 ರಂದು ಹು-ಧಾ ಮಹಾನಗರ ಪಾಲಿಕೆಗೆ ಚುನಾವಣೆ ನಡೆಯಲಿದೆ.ಮತದಾನದ ಹಿನ್ನೆಲೆಯಲ್ಲಿ ಸಪ್ಟಂಬರ್ 2 ರ ಸಂಜೆ 6 ಗಂಟೆಯಿಂದ ಸಪ್ಟಂಬರ್ 4 ರ ಬೆಳಿಗ್ಗೆ ವರೆಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.
ಹಾಗೇ ನಂತರ ಮತ ಎಣಿಕೆ ಹಿನ್ನೆಲೆಯಲ್ಲಿ ಸಪ್ಟಂಬರ್ 5 ರಿಂದ 6 ರ ರಾತ್ರಿ 10 ವರೆಗೆ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ.ಹುಬ್ಬಳ್ಳಿ, ಧಾರವಾಡ ಅವಳಿ ನಗರ ಸೇರಿದಂತೆ ತಾಲೂಕು ಹು-ಧಾ ತಾಲೂಕು ಪ್ರದೇಶದಲ್ಲಿ ನಿಷೇಧಿಸಲಾಗಿದೆ. ಮಧ್ಯ ಮಾರಾಟ ನಿಷೇಧ ಆದೇಶವನ್ನು ಪರಿಣಾಮ ಕಾರಿಯಾಗಿ ಜಾರಿ ತರಲು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಡಿಸಿ ಯವರು ಖಡಕ್ ಸೂಚನೆ ಯನ್ನು ನೀಡಿದ್ದಾರೆ.ಇನ್ನೂ ಈ ಒಂದು ನಿಯಮ ಗಳನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಜರುಗಿಸುವಂತೆ ಸೂಚನೆ ಯನ್ನು ನೀಡಲಾಗಿದೆ.