ಬೆಂಗಳೂರು –
ಕೋವಿಡ್ ನಿಂದಾಗಿ ಬೆಂಗಳೂರಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆ ಯ ಅಧಿಕಾರಿ ಚಂದ್ರಕಲಾ ಅವರು ಮೃತರಾಗಿದ್ದಾರೆ. ಕಳೆದ ಹಲವಾರು ವರುಷಗಳಿಂದ ಇಲಾಖೆಯಲ್ಲಿ ಕಾರ್ಯವನ್ನು ನಿರ್ವಹಿಸುತ್ತಿದ್ದರು ಕಳೆದ ಐದಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಚಾ ರವನ್ನು ತಿಳಿದು ಆಸ್ಪತ್ರೆಗೆ ದಾಖಲಾದ ನಂತರ ಟೇಸ್ಟ್ ಮಾಡಿಸಿದ ನಂತರ ಇವರಿಗೆ ಕರೋನಾ ಸೋಂಕು ಇರೊದು ಕಂಡು ಬಂದಿತು.

ನಂತರ ಚಿಕಿತ್ಸೆ ನೀಡಲಾಗುತ್ತಿತ್ತು.ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಂದ್ರಕಲಾ ಅವ ರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.ಇನ್ನೂ ಮೃತರಾದ ಇವರ ಆತ್ಮಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ ವಿಭಾಗದ ಎಲ್ಲಾ ನೌಕರರು ಆತ್ಮಕ್ಕೆ ಶಾಂತಿ ದೊರಕಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಇದರೊಂದಿಗೆ ನಾಡಿನ ಮೂಲೆ ಮೂಲೆಗಳಿಂದಲೂ ಪದವಿ ಪೂರ್ವ ಶಿಕ್ಷಣ ಇಲಾಖೆ ಯ ಶಿಕ್ಷಕ ಬಳಗದವರೂ ಸಂತಾಪ ಸೂಚಿಸಿದ್ದಾರೆ.