ಧಾರವಾಡ –
ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ದಲ್ಲಿ ನಡೆದಿದೆ ಹೌದು ನಗರದ ಹೊರ ವಲಯದ ಗಣೇಶನಗರದ ಗಳವಿ ದಡ್ಡಿಯಲ್ಲಿ ಈ ಒಂದು ಘಟನೆ ನಡೆದಿದೆ.
ಚಟ್ಟು ಗದಗವಾಲೆ ಆತ್ಮಹತ್ಯೆ ಮಾಡಿಕೊಂಡ ಪತಿಯಾ ಗಿದ್ದು ಮನೀಷಾ ಕೊಲೆಯಾದ ಪತ್ನಿಯಾಗಿದ್ದಾಳೆ. ಗೋವಾ ದಲ್ಲಿ ಕೆಲಸಕ್ಕೆ ಎಂದು ಹೋಗಿದ್ದರು ಪತಿ ಪತ್ನಿ.ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ನಗರಕ್ಕೆ ಬಂದಿದ್ದು ಇಬ್ಬರು ಪತಿ ಪತ್ನಿಯರು.
ಕಳೆದ ರಾತ್ರಿ ಇಬ್ಬರ ನಡುವೆ ನಡೆದಿದ್ದ ಜಗಳ ತೀವ್ರವಾಗಿ ವಿಕೋಪಕ್ಕೆ ಹೋಗಿ ರಾತ್ರಿಯೇ ಪತ್ನಿಯ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಚಟ್ಟು.ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ