ಪಂಜಾಬ್ –
ಪಂಜಾಬ್ ಸರ್ಕಾರವು ಅಲ್ಲಿನ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಸಮಯದಲ್ಲಿ ಭರ್ಜರಿ ಗುಡ್ ನ್ಯೂಸ್ ನೀಡಿದೆ ಹೌದು ನೌಕರ ರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು ಸ್ಥಾಪಿಸಲು ಮುಂದಾಗಿದ್ದು ದೀಪಾವಳಿ ಉಡು ಗೊರೆ ನೀಡಿದೆ.
ಮುಖ್ಯಮಂತ್ರಿ ಭಗವಂತ್ ಮಾನ್ ಈ ಕುರಿತಂತೆ ಸಭೆಯನ್ನು ಮಾಡಿ ತನ್ನ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ವಿಚಾರವನ್ನು ಘೋಷಣೆ ಮಾಡಿದ್ದಾರೆ. ಇದರೊಂ ದಿಗೆ ಪಂಜಾಬ್ ಸರ್ಕಾರದ ನಿರ್ಧಾರವನ್ನು ರಾಜ್ಯದ ನೌಕರರಿಗೆ ದೀಪಾವಳಿ ಉಡುಗೊರೆ ಯಾಗಿ ಉಲ್ಲೇಖಿಸಿದ್ದಾರೆ.
ಹಳೆ ಯೋಜನೆ ಪುನರ್ ಜಾರಿ ಬಗ್ಗೆ ಘೋಷಣೆ ಮಾಡಿದ ಅವರು ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತಾತ್ವಿಕ ನಿರ್ಧಾರ ಕೈಗೊಂಡಿದ್ದೇವೆ. ಇದ ರಿಂದ ಲಕ್ಷಾಂತರ ನೌಕರರಿಗೆ ಅನುಕೂಲವಾ ಗಲಿದೆ ಎಂದರು.ಸರ್ಕಾರಿ ನೌಕರರ 6% ತುಟ್ಟಿ ಭತ್ಯೆಗೆ ರಾಜ್ಯ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಮಾನ್ ಹೇಳಿದ್ದಾರೆ.2004 ರಲ್ಲಿ ಸ್ಥಗಿತಗೊಂಡ ಹಿಂದಿನ ಪಿಂಚಣಿ ಯೋಜನೆ ಯನ್ನು ಮರುಸ್ಥಾಪಿಸುವುದು ರಾಜ್ಯ ಸರ್ಕಾರಿ ನೌಕರರ ಪ್ರಾಥಮಿಕ ಬೇಡಿಕೆಗಳಲ್ಲಿ ಒಂದಾಗಿದ್ದು ಈ ಕುರಿತಂತೆ ದೇಶದ ಹಲವು ರಾಜ್ಯಗಳಲ್ಲಿ ಸರ್ಕಾರಿ ನೌಕರರು ಬೃಹತ್ ಪ್ರಮಾಣದಲ್ಲಿ ಹೋರಾಟವನ್ನು ಮಾಡುತ್ತಿದ್ದು ಕರ್ನಾಟಕ ರಾಜ್ಯದಲ್ಲೂ ಕೂಡಾ ನೌಕರರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.