ಬೆಂಗಳೂರು –
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನ ಮಹಾಮಾರಿಯಿಂದ ರಾಜ್ಯವನ್ನು ರಕ್ಷಣೆ ಮಾಡಲು ನಾಳೆಯಿಂದ ಹದಿನಾಲ್ಕು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾದ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ.ಹಾಗೇ ಇದರೊಂದಿ ಗೆ 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು

ಇಂದಿನ ಕೊರೋನಾ ನಿಯಂತ್ರಣ ಕುರಿತು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿತ್ತು ಈ ಒಂದು ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಆಧಾರದ ಮೇಲೆ ಈ ಒಂದು ನಿರ್ಧಾರಕ್ಕೆ ಬರಲಾಗಿದೆ ಎಂದು ಯಡಿಯೂರಪ್ಪ ಹೇಳಿದರು. ಈ ಕೋವಿಡ್ ಸೋಂ ಕು ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಮಹಾರಾ ಷ್ಟ್ರ ಕ್ಕಿಂತ ಬೆಂಗಳೂರು ಸುತ್ತಾ ಮುತ್ತಾ ಹೆಚ್ಚು ಹರ ಡುತ್ತಿದೆ.ಹೀಗಾಗಿ ಸಚಿವ ಸಂಪುಟ ಸದಸ್ಯರು, ತಜ್ಞರ ಜೊತೆಗೆ ಚರ್ಚಿಸಿ, ಕೆಲವು ನಿರ್ಧಾರಕ್ಕೆ ಬಂದಿದ್ದೇವೆ ಎಮನದರು