ಏಳನೇ ವೇತನ ಆಯೋಗ ವರದಿ ಸಲ್ಲಿಕೆ – ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು ವರದಿಯ ಶಿಫಾರಸುಗಳನ್ನು ಪರಿಶೀಲಿಸಿ ಸೂಕ್ತ ತೀರ್ಮಾನವೆಂದ ಮುಖ್ಯಮಂತ್ರಿ ಸಿದ್ದರಾಮಯ್ಯ…..

Suddi Sante Desk
ಏಳನೇ ವೇತನ ಆಯೋಗ ವರದಿ ಸಲ್ಲಿಕೆ – ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು ವರದಿಯ ಶಿಫಾರಸುಗಳನ್ನು ಪರಿಶೀಲಿಸಿ ಸೂಕ್ತ ತೀರ್ಮಾನವೆಂದ ಮುಖ್ಯಮಂತ್ರಿ ಸಿದ್ದರಾಮಯ್ಯ…..

ಬೆಂಗಳೂರು

ಏಳನೇ ವೇತನ ಆಯೋಗ ವರದಿ ಸಲ್ಲಿಕೆ – ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು ವರದಿಯ ಶಿಫಾರಸುಗಳನ್ನು ಪರಿಶೀಲಿಸಿ ಸೂಕ್ತ ತೀರ್ಮಾ ನವೆಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೌದು

ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ.ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು

 

ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ
ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು.

ಈ ಅವಧಿಯು ಮಾರ್ಚ್ 15ರಂದು ಮುಕ್ತಾಯ ಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ ವರದಿಯಲ್ಲಿ ಕನಿಷ್ಠ ಮೂಲವೇತನವನ್ನು17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ.

ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷ ವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.