ಬೆಂಗಳೂರು –
ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿ ಗೆ ತೆರಳಿದರು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಯಡಿಯೂ ರಪ್ಪ ಹೊಸದಿಲ್ಲಿಗೆ ಪ್ರವಾಸ ಬೆಳೆಸಲಿದ್ದಾರೆ ಇನ್ನೂ ಎಲ್ಲರ ಕಣ್ಣು ಈ ಭೇಟಿ ಮೇಲೆ ನೆಟ್ಟಿದ್ದು ತೀವ್ರ ಕುತೂಹಲ ಕೆರಳಿಸಿದೆ.ಇನ್ನೂ ಮುಖ್ಯಮಂತ್ರಿ ಕಚೇರಿ ಮಾಹಿತಿ ಪ್ರಕಾರ ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಪಡೆಯುವ ಸಲುವಾಗಿ ಈ ಭೇಟಿಯಾಗಿದ್ದು ಆದರೆ ರಾಜ್ಯ ಸಚಿವ ಸಂಪುಟ ಪುನಾರಚನೆಯೂ ಕಾರ್ಯಸೂಚಿಯಲ್ಲಿದೆ ಎನ್ನಲಾಗಿದೆ
ಶುಕ್ರವಾರ ಇಂದು ಸಂಜೆ 7ಕ್ಕೆ ಮುಖ್ಯಮಂತ್ರಿ ಬಿಎಸ್‌ವೈ ಅವರು ಪ್ರಧಾನಿಯವರನ್ನು ಭೇಟಿ ಮಾಡಲಿದ್ದಾರೆ.ಈ ವೇಳೆ ಮೇಕೆದಾಟು ಯೋಜನೆ ಯ ಜತೆಗೆ ರಾಜ್ಯ ರಾಜಕೀಯದ ಬಗ್ಗೆಯೂ ಮಾತನಾಡಲಿದ್ದಾರೆ ಎನ್ನಲಾಗಿದೆ.ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಜು.26ಕ್ಕೆ 2 ವರ್ಷ ಪೂರೈಸಲಿದೆ.ಹೀಗಾಗಿ ಸಂಪುಟ ಪುನಾರಚನೆ ಮಾಡಿ ಹೊಸಬರಿಗೆ ಅವಕಾಶ ಕೊಡಬೇಕೆಂಬ ಬೇಡಿಕೆ ಶಾಸಕರಿಂದ ಇದೆ.ಈ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆಯ ಬಗೆಗೆ ಯಡಿಯೂರಪ್ಪ ವರಿಷ್ಠರ ಜತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕೇಂದ್ರದಲ್ಲಿ ಬಾಕಿ ಉಳಿದಿರುವ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ತೆರಳುತ್ತಿದ್ದೇನೆ ಎಂದು ರಾಜಕೀಯ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಹೇಳಿಕೊಂಡಿದ್ದು ಏನೇ ಆಗಲಿ ಯಡಿಯೂರಪ್ಪ ಅವರ ದೆಹಲಿ ಪ್ರವಾಸ ತೀವ್ರ ಕುತೂಹಲ ಕೆರಳಿಸಿದೆ.