ಕೋಲಾರ –
ಮೊನ್ನೆ ಮೊನ್ನೆಯಷ್ಟೇ ಬೆಳಿಗ್ಗೆ ಮದುವೆಯಾಗಿ ಸಂಜೆ ಮದುವೆ ವಿಚಾರ ಕುರಿತು ಪೊಲೀಸ್ ಠಾಣೆ ಮೆಟ್ಟಿ ಲೇರಿದ ಬಿಗ್ ಬಾಸ್ ಖ್ಯಾತಿಯ ಚ್ರೈತ್ರಾ ಕೊಟ್ಟೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೂಡಲೇ ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಯಂತೆ.ಮದುವೆ ವಿಚಾರವಾಗಿ ವಿವಾದದ ಹಿನ್ನೆಲೆ ಮನನೊಂದು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾ ಗುತ್ತಿದೆ. ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊಂದಿಗೆ ಚೈತ್ರಾ ಕೋಟೂ ರ್ ಮದುವೆಯಾಗಿದ್ದರು.

ಬೆಳಿಗ್ಗೆ ಮದುವೆಯಾಗಿ ಸಂಜೆ ಮದುವೆ ವಿಚಾರ ಕುರಿತು ಸಮಸ್ಯೆ ಆಗಿ ಪೊಲೀಸ್ ಠಾಣೆ ಮೆಟ್ಟಿಲೆ ರಿತ್ತು ಮದುವೆಯಾದ ದಿನವೆ ವಿವಾದಕ್ಕೀಡಾಗಿ ಪೊಲೀಸ್ ಠಾಣೆ ಮಟ್ಟಿಲೇರಿತ್ತು. ಇದೇ ಕಾರಣಕ್ಕೆ ನಟಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕೋಟೂರ್ ಅವರು ಕನ್ಸ್ಟ್ರಕ್ಷನ್ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ನಾಗಾರ್ಜುನ್ ಎಂಬುವವರ ಜೊತೆ ಮಾ.28ರ ಬೆಳಗ್ಗೆ ಸಿಂಪಲ್ ಆಗಿ ಮದುವೆ ಆಗಿದ್ದರು ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ