ಬೆಂಗಳೂರು –
ಬೆಂಗಳೂರಿನಲ್ಲಿ ಸಿಐಡಿ DSP ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಐಡಿಯಲ್ಲಿ DSP ಯಾಗಿದ್ದ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಅಧಿಕಾರಿಯಾಗಿದ್ದಾರೆ. ನಿನ್ನೇ ರಾತ್ರಿ ಅನ್ನಪೂರ್ಣೇಶ್ವರಿ ನಗರದ ಸ್ಬೇಹಿತೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ. ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಲಕ್ಷ್ಮೀ 2014 ನೇ ಬ್ಯಾಚ್ ನ KPSC ಮೂಲಕ ಆಯ್ಕೆಯಾಗಿದ್ದರು.ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡ ಪೊಲೀಸರು ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕುರಿತಂತೆ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

ಪತಿ ಪತ್ನಿಯ ನಡುವೆ ಅಷ್ಟಾಗಿ ಹೊಂದಾಣಿಕೆ ಇರಲಿಲ್ಲವಂತೆ. 8 ವರ್ಷಗಳ ಹಿಂದೆ ಮದುವೆಯಾಗಿದ್ದ ಲಕ್ಷ್ಮೀ.ಖಾಸಗಿ ಕಂಪೆನಿಯಲ್ಲಿ ಕೆಲಸಮಾಡುತ್ತಿದ್ದ ಲಕ್ಷ್ಮಿ ಪತಿ.ಕೋಲಾರದ ಮಾಲೂರು ಮೂಲದ ಲಕ್ಷ್ಮೀ.ಪ್ರೊಬೆಷನರಿ ಅವಧಿ ಮುಗಿಸಿ 2017 ರಲ್ಲಿ ಡಿವೈಎಸ್ ಪಿ ಗಾಗಿ ನೇಮಕವಾಗಿದ್ದರು. ಮೊದಲ ಹುದ್ದೆ ಸಿಐಡಿಯಲ್ಲಿ ನೇಮಕವಾಗಿತ್ತು. ಕೋಣನಕುಂಟೆಯಲ್ಲಿ ವಾಸವಾಗಿದ್ದ ಲಕ್ಷ್ಮೀ.ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದರು.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಸ್ನೇಹಿತನ ಮನೆಯಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಅಧಿಕಾರಿ ಸ್ನೇಹಿತನ ಮನೆಯಲ್ಲಿ ರಾತ್ರಿ ಪಾರ್ಟಿ ಮುಗಿಸಿದ ನಂತರ ನೇಣಿಗೆ ಶರಣಾಗಿದ್ದಾರೆ. ಕೊಠಡಿಯೊಳಗೆ ತೆರಳಿದ್ದ ಅವರು ಎಷ್ಟೊತ್ತಾದರೂ ಬಾಗಿಲು ತೆರೆದಿರಲಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದರಿಂದ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.ಸಧ್ಯ ಪ್ರಕರಣವನ್ನು ದಾಖಲು ಮಾಡಿಕೊಂಡಿರುವ ಅನ್ನಪೂರ್ಣೇಶ್ವರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮಾಡ್ತಾ ಇದ್ದಾರೆ.