This is the title of the web page
This is the title of the web page

Live Stream

[ytplayer id=’1198′]

October 2024
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

ಕಲ್ಬುರ್ಗಿ

ಸರ್ಕಾರಿ ಕಾಲೇಜಿನ ಇಬ್ಬರು ಪ್ರಾಂಶುಪಾಲರ ಬಂಧನ – ವಶಕ್ಕೆ ತಗೆದುಕೊಂಡು ವಿಚಾರಣೆ ಮಾಡುತ್ತಿರುವ CID ಪೊಲೀಸರು…..

ಸರ್ಕಾರಿ ಕಾಲೇಜಿನ ಇಬ್ಬರು ಪ್ರಾಂಶುಪಾಲರ ಬಂಧನ – ವಶಕ್ಕೆ ತಗೆದುಕೊಂಡು ವಿಚಾರಣೆ ಮಾಡುತ್ತಿರುವ CID ಪೊಲೀಸರು…..
WhatsApp Group Join Now
Telegram Group Join Now

ಕಲಬುರಗಿ

ಸರ್ಕಾರಿ ಕಾಲೇಜಿನ ಇಬ್ಬರು ಪ್ರಾಂಶುಪಾಲರ ಬಂಧನ – ವಶಕ್ಕೆ ತಗೆದುಕೊಂಡು ವಿಚಾರಣೆ ಮಾಡುತ್ತಿರುವ CID ಪೊಲೀಸರು ಹೌದು ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಾಥ್ ನೀಡಿದ್ದಾ ರೆಂಬ ಆರೋಪದ ಮೇಲೆ ಇಬ್ಬರು ಪ್ರಾಂಶುಪಾಲ ರನ್ನು ಬಂಧನ ಮಾಡಿದ ಘಟನೆ ಕಲಬುರಗಿ ಯಲ್ಲಿ ನಡೆದಿದೆ.ಹೌದು ಕೆಇಎ ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್​ ಬಳಸಿ ಅಕ್ರಮವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಕಲಬುರಗಿಯಲ್ಲಿ ಪಿಯು ಕಾಲೇಜಿನ ಇಬ್ಬರು ಪ್ರಾಂಶುಪಾಲರನ್ನು ಬಂಧಿಸಿ ದ್ದಾರೆ.

ಅಕ್ಟೋಬರ್​​​ 28ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಎಫ್‌ಡಿಎ ನೇಮ ಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿ ಸಿದಂತೆ ಸಿಐಡಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು ಈ ಒಂದು ಪ್ರಕರಣದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ತಗೆದುಕೊಂಡಿದ್ದಾರೆ. ಅಫಜ ಲಪುರ ತಾಲೂಕಿನ ಕರಜಗಿ ಗ್ರಾಮದ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ಚಂದ್ರಕಾಂತ್​ ಬುರಕಲ್​ ಮತ್ತು ಅಫಜಲಪುರ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಸಣ್ಣ ಪೂಜಾರಿ ಬಂಧಿತರಾಗಿದ್ದಾರೆ.

ರಾಯಲ್​ ಪಬ್ಲಿಕ್​ ಶಾಲೆಯ ಕೆಇಎ ಪರೀಕ್ಷಾ ಕೇಂದ್ರದ ಮುಖ್ಯಸ್ಥರಾಗಿದ್ದ ಚಂದ್ರಕಾಂತ್, ಅಧಿಕೃತ ಅಭ್ಯರ್ಥಿಗಳ ಬದಲು ಬೇರೆಯವರಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದ್ದ ರಂತೆ ಬಸಣ್ಣ ಪೂಜಾರಿ ಪರೀಕ್ಷೆಯ ಕಸ್ಟೋಡಿ ಯನ್ ಆಗಿದ್ದರು.ಈ ಇಬ್ಬರು ಪ್ರಶ್ನೆ ಪತ್ರಿಕೆಯನ್ನೂ ಸೋರಿಕೆ ಮಾಡಿರುವ ಗಂಭೀರ ಆರೋಪ ಎದು ರಿಸುತ್ತಿದ್ದಾರೆ.

ಈಗಾಗಲೇ ಬಂಧಿತ ಆರೋಪಿಗಳು ನೀಡಿದ ಸುಳಿವಿ‌ನ ಆಧಾರದಲ್ಲಿ ಕಳೆದ ಕೆಲ ದಿ‌ನಗಳ ಹಿಂದೆ ಈ ಇಬ್ಬರನ್ನು ಸಿಐಡಿ ಅಧಿಕಾರಿಗಳು ಕರೆಯಿಸಿ ತೀವ್ರ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದರು.ಆ ಬಳಿಕ ಇದೀಗ ಬಂಧಿಸಿ ಕಲಬುರಗಿ ಜೆಎಮ್‌ಎ ಫ್‌ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಕಲಬುರಗಿ ನಗರದ ಶರಣಬಸವೇಶ್ವರ ವಿವಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಅಭ್ಯರ್ಥಿ ತ್ರಿಮೂರ್ತಿ ಎಂಬಾತ ಹಾಜರಾಗಿದ್ದು ಬ್ಲೂಟೂತ್ ಡಿವೈಸ್ ಕೀ ಮೂಲಕ ಉತ್ತರ ತಿಳಿದುಕೊಂಡು ಪರೀಕ್ಷೆ ಬರೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ. ಪರೀಕ್ಷಾ ಅಕ್ರಮದ ತನಿಖೆಯಲ್ಲಿ ಕಿಂಗ್​ ಪಿನ್​ ಆರ್.ಡಿ.ಪಾಟೀಲ್​ ಎಂಬಾತನನ್ನು ಬಂಧಿಸಲಾಗಿದೆ.

ಈತ 2021ರಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ನೇಮಕಾತಿ ಪರೀಕ್ಷಾ ಅಕ್ರಮದ ರೂವಾರಿಯಾಗಿದ್ದ. ಇದೀಗ ಎಫ್‌ಡಿಎ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ.

ಸುದ್ದಿ ಸಂತೆ ನ್ಯೂಸ್ ಕಲಬುರಗಿ…..


Google News

 

 

WhatsApp Group Join Now
Telegram Group Join Now
Suddi Sante Desk