ಬೆಂಗಳೂರು –
ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಹೈಸ್ಕೂಲ್ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಹೌದು ರಜೆಯನ್ನು ಘೋಷಿಸಿದ್ದಾರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಈ ಒಂದು ಆದೇಶವಾಗಿದೆ. ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ ಸಿಎಂ ಬೊಮ್ಮಾಯಿ ಅವರು

ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದು ಸಂಬಂಧಿಸಿದ ಎಲ್ಲರೂ ಸಹಕರಿಸುವಂತೆ ಕರೆ ನೀಡಿದ್ದಾರೆ.