ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ CM – ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಂತೋಷದ ಸುದ್ದಿಯನ್ನು ನೀಡಿದ ನಾಡದೋರೆ

Suddi Sante Desk
ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ CM – ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಂತೋಷದ ಸುದ್ದಿಯನ್ನು ನೀಡಿದ ನಾಡದೋರೆ

ಬೆಂಗಳೂರು

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದಾರೆ.ಹೌದು ರಾಜ್ಯದ ಶಿಕ್ಷಕ ಸಮು ದಾಯಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.

ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದ್ದರೂ ಚುನಾವಣಾ ಆಯೋಗದ ಅನುಮತಿ ಪಡೆದು ಶಿಕ್ಷಕರ ವರ್ಗಾ ವಣೆ ಪ್ರಕ್ರಿಯೆಯನ್ನು ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಹೇಳಿದ್ದಾರೆ.

ಧೀರ್ಘಾವದಿಯಿಂದ ನೆನೆಗುದಿಯಲ್ಲಿದ್ದ ಪ್ರಾಥ ಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ಎಸ್. ಷಡಾಕ್ಷರಿ ಹಾಗೂ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಸಿದ್ದಬಸಪ್ಪ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಶಿಕ್ಷಕರು ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕುರಿತು ಚರ್ಚಿಸಿದ್ದರು.

ಇನ್ನೂ ಈಗಾಗಲೇ ವರ್ಗಾವಣೆಗಾಗಿ ಈಗಾಗಲೇ 79 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅರ್ಜಿ ಸಲ್ಲಿಸಿ ರುತ್ತಾರೆ.ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಆಯಾ ತಾಲ್ಲೂಕಿನ ಒಳಗಡೆ ವರ್ಗಾವಣೆ ಮಾಡುವುದು ದೀರ್ಘಕಾಲದಿಂದ ನೆನೆಗುದಿಯ ಲ್ಲಿರುವ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಯನ್ನು ಶೀಘ್ರವಾಗಿ ಕೈಗೊಳ್ಳುವಂತೆ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಲಾಗಿದೆ.

ಶಿಕ್ಷಕರ ಸಮಸ್ಯೆ ಹಾಗೂ ಸಂಘದ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಈಗಾಗಲೇ ಯಾವುದೇ ವರ್ಗಾವಣೆಗಳನ್ನು ಮಾಡಬೇಕಾಗಿ ದ್ದಲ್ಲಿ ರಾಜ್ಯ ಚುನಾವಣಾ ಆಯೋಗದ ಅನು ಮತಿಯನ್ನು ಪಡೆಯುವಂತೆ ಸುತ್ತೋಲೆಯನ್ನು ಹೊರಡಿಸಿರುವುದರಿಂದ

ರಾಜ್ಯ ಚುನಾವಣಾ ಆಯೋಗದ ಅನುಮತಿ ಯನ್ನು ಪಡೆದುಕೊಂಡು ಶಿಕ್ಷಕರ ವರ್ಗಾವಣೆ ಕಡತಕ್ಕೆ ಅನುಮೋದನೆ ನೀಡಿ ವರ್ಗಾವಣೆ ಪ್ರಕ್ರಿಯೆಗಳನ್ನು ಆರಂಭಿಸಲು ನಿರ್ದೇಶನ ನೀಡುವ ಭರವಸೆ ಕೊಟ್ಟಿದ್ದು ಯಾವಾಗ ಆರಂಭವಾಗಲಿದೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.