ಬೆಂಗಳೂರು –
ಈ ವರ್ಷ ಎಸ್ ಎಸ್ ಎಲ್ ಸಿ ಯ ಕಡಿಮೆ ಫಲಿತಾಂಶದಿಂದ ಮುಖ್ಯಮಂತ್ರಿ ಸುಧಾರಣೆ ಗಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಟಾಸ್ಕ್ ನೀಡಿದ್ದಾರೆ.ಮುಂದಿನ ವರ್ಷಗಳಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಕುಸಿತವಾದರೆ ಆಯಾ ಜಿಲ್ಲಾ ಸಿಇಒ, ಡಿಡಿಪಿಐ ಮತ್ತು ಬಿಇಒ ಗಳನ್ನು ಜವಾಬ್ದಾರರನ್ನಾಗಿಸಲಾಗುವುದು ಎಂದಿ ದ್ದಾರೆ
ಇದರೊಂದಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.ಎಸ್.ಎಸ್.ಎಲ್.ಸಿ ಪರೀಕ್ಷೆ ಯಲ್ಲಿ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.10 ರಷ್ಟು ಕಡಿಮೆಯಾಗಿದೆ.ಪರೀಕ್ಷಾ ಅಕ್ರಮಗಳನ್ನು ನಿಯಂತ್ರಣದಲ್ಲಿಟ್ಟಿರುವುದೇ ಫಲಿತಾ೦ಶ ಕುಸಿ ಯಲು ಪ್ರಮುಖ ಕಾರಣವಾಗಲು ಸಾಧ್ಯವಿಲ್ಲ.
ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳ ಬೇಕು ಇದರಲ್ಲಿ ಜಿಲ್ಲಾಧಿಕಾರಿಗಳು, ಸಿಇಓಗಳು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳದ್ದೂ ಜವಾಬ್ದಾರಿ ಇದೆ. ಒಟ್ಟಿಗೆ ಕುಳಿತು ಚರ್ಚೆ ಮಾಡಿ ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಸೂಚನೆ ನೀಡಿದ್ದಾರೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..