ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಜಾರಿ ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರವನ್ನು ಒತ್ತಾಯಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದೆ.
ನೌಕರರ ಸಂಘದ ನೂತನ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ನಿಯೋಗದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಸಕಾರಾತ್ಮವಾಗಿ ಸ್ಪಂದಿಸಿದ್ದು, ಒಪಿಎಸ್ ಕುರಿತಾಗಿ ನೇಮಿಸಿರುವ ಸಮಿತಿಯಿಂದ ವರದಿ ಪಡೆದು, ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಅಲ್ಲದೇ ಸರ್ಕಾರಿ ನೌಕರರು ಹಾಗೂ ಕುಟುಂಬದ ಅವಲಂಬಿತರಿಗೆ ನಗದು ರಹಿತ ಆರೋಗ್ಯ ಸೇವೆ ಒದಗಿಸುವ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಬಗ್ಗೆಯೂ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……