ಬೆಂಗಳೂರು –
ನಟ ಯಶ್ ಅಭಿಮಾನಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ ಸಚಿವ HK ಪಾಟೀಲ್ ಮನವ
ಗೆ ಸ್ಪಂದಿಸಿದ ಮುಖ್ಯಮಂತ್ರಿ ಹೌದು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೃತ ಪಟ್ಟ ಮೂವರು ಯುವಕರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ.
ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನೆಚ್ಚಿನ ನಟ ಕಟೌಟ್ ನಿಲ್ಲಿಸಲಾಗುತ್ತಿತ್ತು.ಈ ವೇಳೆ ಕಟೌಟ್ ಗೆ ವಿದ್ಯುತ್ ಸ್ಪರ್ಶಿಸಿ ಹನುಮಂತ ಹರಿಜನ (21), ಮುರಳಿ ನಡವಿನಮನಿ (20) ಹಾಗೂ ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟಿದ್ದರು.
ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ. ಅವರನ್ನು ನಂಬಿದ್ದ ಕುಟುಂಬಗಳೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿ ಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
ಇನ್ನೂ ಸಚಿವ ಹೆಚ್ ಕೆ ಪಾಟೀಲ್ ಅವರ ಪತ್ರಕ್ಕೆ ಮುಖ್ಯಮಂತ್ರಿ ತುರ್ತಾಗಿ ಸ್ಪಂದಿಸಿದ್ದಾರೆ..ಇತ್ತ ಈ ಒಂದು ಘಟನೆ ಕುರಿತು ನಟ ಯಶ್ ಈಗಾಗಲೇ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬ ದವರಿಗೆ ಸಾಂತ್ವನ ಹೇಳಿದ್ದು ಪರಿಹಾರ ದ ಭರವಸೆ ಯನ್ನು ಕೂಡಾ ನೀಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……