ಬೆಂಗಳೂರು –
CM ಸಿದ್ದರಾಮಯ್ಯ ಅವರ ಭವಿಷ್ಯದ ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್ – ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಧೀಶರು ಏನಾಗಲಿದೆಯೋ ಏನೋ ಎಲ್ಲರ ಚಿತ್ತ ಹೈಕೋರ್ಟ್ ನತ್ತ
ಮುಡಾ ದಲ್ಲಿ ನಡೆದಿದೆ ಎನ್ನಲಾದ ಹಗರಣ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಸಲ್ಲಿಸಿರುವ ಅರ್ಜಿಯ ತೀರ್ಪುನ್ನು ಹೈಕೋರ್ಟ್ ಕಾಯ್ದಿರಿಸಿದೆ.ವಾದ ವಿವಾದವನ್ನು ಆಲಿಸಿದ ನಾಯಾಧೀಶರು ಅಂತಿಮ ಆದೇಶದ ತೀರ್ಪನ್ನು ಹೈಕೋರ್ಟ್ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸಿ ಅಂತಿಮವಾಗಿ ಸುಧೀರ್ಘ ವಾಗಿ ಪ್ರತಿವಾದದವು ನಡೆದಿದ್ದು ಕಂಡು ಬಂದಿತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿ ಸಿದೆ ಇನ್ನೂ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳ ಗೊಂಡ ಏಕಸದಸ್ಯ ಪೀಠವು ತೀರ್ಪು ಕಾಯ್ದಿರಿಸಿದ್ದು
ಇನ್ನೂ ಮಧ್ಯಂತರ ಆದೇಶವು ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.ಈಗಾಗಲೇ ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿ ದ್ದಾರೆ.ಮುಖ್ಯಮಂತ್ರಿಗಳ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..