ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರೇ 1987 ರಿಂದ 2024 ರವರೆಗೆ ತುಟ್ಟಿಭತ್ಯೆ’ ಹೆಚ್ಚಳದ ಆದೇಶಗಳ ಸಂಪೂರ್ಣ ಪಟ್ಟಿ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.38.75 ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಕೃತ ವಾಗಿ ಆದೇಶ ಹೊರಡಿಸಿದೆ.ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ
ಅದರಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯ ಹೆಚ್ಚಳ ಆದೇಶಗಳು ದಿನಾಂಕ 01-01-1987 ರಿಂದ ದಿನಾಂಕ 01-04-2024 ರವರೆಗೆ ಇಲ್ಲಿದೆ ಸಂಪೂರ್ಣ ಮಾಹಿತಿಯನ್ನು ನೌಕರರಿಗಾಗಿ ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..