ಹರ್ಷನ ಕೊಲೆಗೆ ಖಂಡನೆ ಹುಬ್ಬಳ್ಳಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ – ಸಿಡಿದೆದ್ದ ಹಿಂದೂಪರ ಸಂಘಟನೆಗಳು…..

Suddi Sante Desk

ಹುಬ್ಬಳ್ಳಿ ಧಾರವಾಡ –

ಶಿವಮೊಗ್ಗದಲ್ಲಿ ನಡೆದ ಹಿಂದು ಕಾರ್ಯಕರ್ತ ಹರ್ಷ ಕೊಲೆಗೆ ರಾಜ್ಯಾಧ್ಯಂತ ಖಂಡನೆ ವ್ಯಕ್ತವಾಗುತ್ತಿದ್ದು ಘಟನೆ ಯನ್ನು ಖಂಡಿಸಿ ಹುಬ್ಬಳ್ಳಿ ಧಾರವಾಡದಲ್ಲೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಮುಖಂಡರು ಅವಳಿ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ಮಾಡಿದರು.

ಹೌದು ಘಟನೆಗೆ ಹುಬ್ಬಳ್ಳಿ ಧಾರವಾಡದಲ್ಲೂ ಖಂಡನೆ ವ್ಯಕ್ತವಾಗುತ್ತಿದ್ದು ಕಳೆದ ಎರಡು ದಿನಗಳಿಂದ ನಿರಂತರ ವಾಗಿ ಪ್ರತಿಭಟನೆಗಳು ಹೋರಾಟಗಳು ನಡೆಯುತ್ತಿದ್ದು ಇಂದು ಕೂಡಾ ಅವಳಿ ನಗರದಲ್ಲಿ ಬೃಹತ್ ಪ್ರತಿಭಟನೆ ಯನ್ನು ಮಾಡಿ ಘಟನೆಯನ್ನು ಖಂಡಿಸಲಾಯಿತು.ಹೌದು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಜರಂಗದಳ ಮತ್ತು BJP ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದರು.ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆಯನ್ನು ಮಾಡಿ ಆಕ್ರೋಶವನ್ನು ವ್ಯಕ್ತಪಡಿಸಿದರು.

ಹರ್ಷ ಕೊಲೆಯ ಪ್ರತಿಕಾರ ತೀರಿಸಿಕೊಳ್ಳುತ್ತೆವೆಂದು ಘೋಷಣೆಗಳನ್ನು ಕೂಗಿದರು.ಹಾಗೇ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಆಗ್ರಹವನ್ನು ಮಾಡಿದರು. ಇನ್ನೂ ಇತ್ತ ಧಾರವಾಡದಲ್ಲೂ ಕೂಡಾ ಪ್ರತಿಭಟನೆ ಕಂಡು ಬಂದಿತು. ಘಟನೆಯನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆಯನ್ನು ಮಾಡಲಾ ಯಿತು.ಹಿಂದೂ ಹರ್ಷ ಹತ್ಯೆ ಖಂಡಿಸಿ ಪ್ರತಿಭಟನೆ ಮಾಡಲಾಯಿತು.ಧಾರವಾಡ ರಾಮ್ ಸೇನಾ ವತಿಯಿಂದ ನಗರದಲ್ಲಿ ಪ್ರತಿಭಟನೆ ಮಾಡಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ಖಂಡಿಸಿದರು ಕಾರ್ಯಕ ರ್ತರು.

ರಾಜಕೀಯ ವ್ಯಕ್ತಿಗಳು ತಮ್ಮ ಬೆಳೆಬೆಯಿಸಿಕೊಳ್ಳುತ್ತಿರುವ ರಾಜಕಾರಣಿಗಳ ಮೇಲೆ ಹರಿಹಾಯ್ದರು ರಾಮ್ ಸೇನೆ ಕಾರ್ಯಕರ್ತರು ಮುಖಂಡರು.ಹಿಂದೂ ಪರ ಸರ್ಕಾರವಿ ದ್ದರೂ ಹಿಂದುಗಳಿಗೆ ನ್ಯಾಯ ಸಿಗುತ್ತಿಲ್ಲವೆಂದು ಆಕ್ರೋಶ ವನ್ನು ವ್ಯಕ್ತಪಡಿಸಿದರು.

ಇದೇ ರೀತಿ ಮುಂದುವರೆದಲ್ಲಿ ಹಿಂದೂಗಳು ಕೂಡ ಅಡ್ಡದಾರಿ ಹಿಡಿಬೇಕಾಗುತ್ತೆ ಎಂದು ಎಚ್ಚರಿಕೆಯನ್ನು ನೀಡಿದರು.ಆದಷ್ಟೂ ಬೇಗ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ನೀಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.