ಹುಬ್ಬಳ್ಳಿ –
ಕೇಂದ್ರ ಶಿಕ್ಷಣ ಸಚಿವರಾಗಿ ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸನ್ಮಾನ್ಯ Pralhad Joshi ಅವರಿಗೆ ಅನಂತ ಅಭಿನಂದನೆಗಳು ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ ಪತ್ರಿಕಾ ಪ್ರಕಟಣೆ ಮೂಲಕ ಹೇಳಿಕೆ ನೀಡಿದ ಅವರು
ದಶಕಗಳ ಕಾಲದ ಸುದೀರ್ಘ ಸಂಸದೀಯ ಅನುಭವ ಸಮರ್ಥ ಆಡಳಿತ ಹಾಗೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಸೌಮ್ಯ ಮತ್ತು ದಿಟ್ಟ ನಾಯಕತ್ವ ಅವರದ್ದು ಅವರ ಈ ಅಪಾರ ಅನುಭವ ಹಾಗೂ ಸತತ ಜನಸೇವೆಯ ಬದ್ಧತೆಯು ಇದೀಗ ದೇಶದ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಶಕ್ತಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಜೋಶಿ ಯವರ ಸಾರಥ್ಯವು ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಲಿದೆ ಎಂಬ ವಿಶ್ವಾಸ ನನಗಿದೆ.ವಿಕಸಿತ ಭಾರತ’ದ ಕನಸಿಗೆ ಪೂರಕವಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವ ಅವರ ಈ ಹೊಸ ಪಯಣ ಅತ್ಯಂತ ಯಶಸ್ವಿಯಾಗಲಿ ಎಂದು ಹೃದಯಪೂರ್ವಕವಾಗಿ ಹಾರೈಸುತ್ತೇನೆ ಎಂದಿದ್ದಾರೆ



