ನವದೆಹಲಿ –
ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿ ಗೌರವ ಶಿಕ್ಷಕರಿಗೆ ಅಭಿನಂದನೆಗಳ ಮಹಾಪೂರ ಹೌದು ರಾಜ್ಯದ ಇಬ್ಬರು ಕೇಂದ್ರ ಸರ್ಕಾರದ 2023ನೇ ಸಾಲಿನ ಅತ್ಯುತ್ತಮ ಶಿಕ್ಷಕ, ಶಿಕ್ಷಕಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ದೇಶಾದ್ಯಂತ 50 ಮಂದಿಗೆ ಪ್ರಶಸ್ತಿ ಪ್ರಕಟಿಸಲಾ ಗಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಕನ್ನಡ ಶಿಕ್ಷಕ ನಾರಾಯಣ ಪರಮೇಶ್ವರ್ ಭಾಗವತ್ ಮತ್ತು ಬಾಗಲಕೋಟೆಯ ಕೆಎಲ್ ಇ ಸೊಸೈಟಿಯ ಎಸ್ ಸಿಪಿ ಜೂನಿಯರ್ ಕಾಲೇಜಿನ ಸಪ್ನಾ ಶ್ರೀಶೈಲ ಅನಿಗೋಳ ಅವರಿಗೆ ಪ್ರಶಸ್ತಿ ಲಭಿಸಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಶಿಕ್ಷಕರ ದಿನಾಚರಣೆಯಂದು ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು ಪ್ರಮಾಣ ಪತ್ರ ಹಾಗೂ 50 ಸಾವಿರ ರೂ. ನಗದು ಹಾಗೂ ಬೆಳ್ಳಿ ಪದಕ ಒಳಗೊಂಡಿರಲಿದೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..