ದೆಹಲಿ –
ಮಹಾಮಾರಿ ಕರೋನಾಗೆ ಮತ್ತೊರ್ವ ಶಾಸಕ ಸಾವಿಗೀಡಾಗಿದ್ದಾರೆ.ಹೌದು ಕಳೆದ ಹಲವಾರು ದಿನಗಳಿಂದ ಕರೋನ ಸೊಂಕು ಕಾಣಿಸಿಕೊಂಡಿತ್ತು. ನಂತರ ಲಿವರ್ ಗೆ ಸೋಂಕು ತಗುಲಿತ್ತು ತದನಂತರ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್, ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಉದಯಪುರದ ವಲ್ಲಭನಗರ ಕ್ಷೇತ್ರದಿಂದ ಗೆದ್ದಿದ್ದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್ ಗೆ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು.
ಈ ಬಳಿಕ ಅವರ ಲಿವರ್ ಗೂ ಸೋಂಕು ತಗುಲಿತ್ತು. ಹೀಗಾಗಿ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ರಾಜಸ್ಥಾನದ ಶಾಸಕ ಚಿಕಿತ್ಸೆ ಫಲಕಾರಿಯಾಗದೇ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.