ಸೋನಿಪತ್
ಹೆತ್ತ ಮಗನೇ ತಂದೆ-ತಾಯಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಹರಿಯಾಣದ ಸೋನಿ ಪತ್ ನಲ್ಲಿ ನಡೆದಿದೆ. ಮಾಟಿಂಡು ಗ್ರಾಮದಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ದೀಪಕ್ ಎಂಬಾತ ಹೀನಾಯ ಕೃತ್ಯ ವೆಸಗಿದ್ದಾನೆ. ನಿನ್ನೆ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ದೀಪಕ್ ಮತ್ತು ಆತನ ತಂದೆ ರಾಮ್ ಧನ್ ಮತ್ತು ತಾಯಿ ನಡುವೆ ಜಗಳ ನಡೆದಿದೆ.
ಈ ವೇಳೆ, ಕೋಪಗೊಂಡ ದೀಪಕ್ ಕೊಡಲಿಯಿಂದ ತಂದೆ – ತಾಯಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಅವರ ಶವಗಳಿಗೆ ಬೆಂಕಿ ಇಟ್ಟಿದ್ದಾನೆ. ನಂತರ ತಾನು ಕೋಣೆಗೆ ಹೋಗಿ ವಿಷಪೂರಿತ ವಸ್ತುವನ್ನು ತಿಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ಸಂಬಂಧ ಡಿಎಸ್ಪಿ ಡಾ.ರವೀಂದ್ರ ಅವರು ಮಾಹಿತಿ ನೀಡಿದ್ದು, ಮಾಟಿಂಡು ಗ್ರಾಮದಲ್ಲಿ ದೀಪಕ್ ಹೆಡ್ ಕಾನ್ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದನು.
ಯಾವುದೋ ಕೌಟುಂಬಿಕ ಕಲಹದಿಂದ ದೀಪಕ್ ಮತ್ತು ಪೋಷಕರ ನಡುವೆ ಜಗಳ ನಡೆದಿದೆ. ಈ ವೇಳೆ, ದೀಪಕ್ ತಂದೆ – ತಾಯಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದಾನೆ. ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದನು. ಈತನನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದರು.ಇನ್ನೂ ಸಧ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.