ಬೆಂಗಳೂರು –
ಕಿಲ್ಲರ್ ಬಿಎಂಟಿಸಿ ಗೆ ಪೊಲೀಸ್ ಕಾನ್‌ಸ್ಟೇಬಲ್ ರೊಬ್ಬರು ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಕಾನ್ಸ್‌ಟೇಬಲ್ ಸಾವಿಗೀಡಾ ಗಿದ್ದಾರೆ. ಬ್ಯಾಡರಹಳ್ಳಿ ಸಮೀಪ ನಡೆದ ಅಪಘಾತ ಸಂಭವಿಸಿದ್ದು, ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಾವನ್ನಪ್ಪಿದ್ದಾರೆ.

ರಾಮಾಚಾರಿ (47) ಸಾವನ್ನಪ್ಪಿದ ಕಾನ್‌ಸ್ಟೇಬಲ್. ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ರಾಮಚಾರಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ 1.45 ರ ಸುಮಾರಿಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಸಮೀಪ ಬೈಕ್ ನಲ್ಲಿ ಚಲಿಸುತ್ತಿದ್ದ ರಾಮಚಾರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ತಲೆಗೆ ತೀವ್ರತರ ಪೆಟ್ಟಾಗಿದೆ. ಗಾಯಾಳು ಪೊಲೀಸ್ ಪೇದೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಷ್ಟರಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ರಾಮಚಾರಿ ಅವರ ಸಾವಿಗೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ ಸಂತಾಪ ಸೂಚಿಸಿದ್ದಾರೆ.