ದಾವೋಸ್ –
ಮುಖ್ಯಮಂತ್ರಿ ಅವರ ದಾವೋಸ್ ಪ್ರವಾಸ ಮುಂದುವರೆ ದಿದ್ದು CM ಸಮ್ಮುಖದಲ್ಲಿ ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾ ವೇಶದಲ್ಲಿ ಮೆ: ಲುಲು ಗ್ರೂಪ್ ಇಂಟರ್ ನ್ಯಾಷನಲ್ ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾ ಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು.
ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಲುಲು ಗ್ರೂಪ್ ರಾಜ್ಯ ದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು.4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾ ಗುವ ನಿರೀಕ್ಷೆ ಇದೆ.