ಹುಬ್ಬಳ್ಳಿ
ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ಪರಿಶೀಲನೆ ಮಾಡಿದ ಪಾಲಿಕೆಯ ಆಯುಕ್ತರು – ಪೊಲೀಸ. ರೊಂದಿಗೆ ಸ್ವತಃ ವಾಹನಗಳನ್ನು ಚೆಕ್ ಮಾಡಿದ ಪಾಲಿಕೆಯ ಆಯುಕ್ತ ಡಾ ಈಶ್ವರ ಉಳ್ಳಾಗಡ್ಡಿ
ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಒಂದೊಂದು ಕಾರ್ಯಚಟುವಟಿಕೆಗಳು ಆರಂಭಗೊಂಡಿವೆ.ಅಕ್ರಮಗಳಿಗೆ ಬ್ರೇಕ್ ಹಾಕಲು ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು ಈ ಒಂದು ಚೆಕ್ ಪೋಸ್ಟ್ ಗಳಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ ಈಶ್ವರ ಉಳ್ಳಾಗಡ್ಡಿ ಯವರು ಭೇಟಿ ನೀಡಿ ಪರಿಶೀಲನೆ ಮಾಡಿದರು.
ಚೆಕ್ ಪೋಸ್ಟ್ ಗಳಲ್ಲಿನ ಮೂಲಭೂತ ಸೌಲಭ್ಯ ಗಳು ಸೇರಿದಂತೆ ಹಲವಾರು ವಿಚಾರಗಳನ್ನು ಚೆಕ್ ಪೋಸ್ಟ್ ಗಳಲ್ಲಿನ ಸಿಬ್ಬಂದಿಗಳಿಂದ ತಿಳಿದು ಕೊಂಡರು.ಸಿಬ್ಬಂದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ,ವಿದ್ಯುತ್ ವ್ಯವಸ್ಥೆ ಹೀಗೆ ಎಲ್ಲವನ್ನು ಸರಿಯಾಗಿ ಕಲ್ಪಿಸುವಂತೆ ಸೂಚನೆ ನೀಡಿ ಮಾಹಿತಿಯನ್ನು ಪಡೆದುಕೊಂಡರು.
ಇದೇ ವೇಳೆ ಚೆಕ್ ಪೋಸ್ಟ್ ಗಳಿಂದ ಹೋಗುವ ಬರುವ ವಾಹನಗಳನ್ನು ಪಾಲಿಕೆಯ ಆಯುಕ್ತರು ಪರಿಶೀಲನೆ ಮಾಡಿದರು.ಮಧ್ಯರಾತ್ರಿ ವಾಹನ ಚೆಕ್ ಮಾಡಿದ ಪಾಲಿಕೆಯ ಆಯುಕ್ತರು ಪೊಲೀಸರೊಂದಿಗೆ ವಾಹನ ಗಳನ್ನು ವೀಕ್ಷಣೆ ಮಾಡಿ ಚೆಕ್ ಮಾಡಿದರು.ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ ಈಶ್ವರ ಉಳ್ಳಾಗಡ್ಡಿ ಯವರಿಂದ ಈ ಒಂದು ವಾಹನಗಳ ಪರಿಶೀಲನೆ ಕಾರ್ಯವು ಪೊಲೀಸ ರೊಂದಿಗೆ ಮಧ್ಯರಾತ್ರಿ ಚೆಕ್ ಪೋಸ್ಟ್ ನಲ್ಲಿ ನಡೆಯಿತು.
ವಾಹನಗಳನ್ನು ನಿಲ್ಲಿಸಿ ಪರಿಶೀಲನೆ ಮಾಡಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಒಂದು ಕಾರ್ಯವು ನಡೆಯಿತು.ನಗರದಲ್ಲಿ ನಾಲ್ಕು ದಿಕ್ಕಿನಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಸ್ವತಃ ವಾಹನಗಳ ಪರಿಶೀಲನೆ ನಡೆಸಿದ ಆಯುಕ್ತರು ಮಧ್ಯರಾತ್ರಿ ಸರಪ್ರೈಜ್ ಆಗಿ ಚೆಕ್ ಪೋಸ್ಟ್ ಗೆ ತೆರಳಿ ವಾಹನ ಗಳ ಪರಿಶೀಲನೆ ಮಾಡಿದರು.
ನಾಲ್ಕಕ್ಕೂ ಹೆಚ್ಚು ಚೆಕ್ ಪೋಸ್ಟ್ ಗಳಿಗೆ ತೆರಳಿ ಪರಿಶೀಲನೆ ಮಾಡಿ ಕೆಲ ಚೆಕ್ ಪೋಸ್ಟ್ ಗಳಲ್ಲಿ ಸೌಲಭ್ಯಗಳನ್ನು ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಆಯುಕ್ತರು.ಇನ್ನೂ ತಾವೇ ಖುದ್ದಾಗಿ ಚೆಕ್ ಪೋಸ್ಟ್ ನಲ್ಲಿ ವಾಹನ ಗಳನ್ನು ಪರಿಶೀಲನೆ ನಡೆಸಿ ಬಿಸಿ ಮುಟ್ಟಿಸಿದ್ದು ಕಂಡು ಬಂದಿತು. ಚೆಕ್ ಪೋಸ್ಟ್ ಸಿಬ್ಬಂದಿ ಗಳಿಗೆ ಕೆಲವೊಂದಿಷ್ಟು ವಿಚಾರಗಳ ಕುರಿತಂತೆ ಸೂಚನೆಗಳನ್ನು ನೀಡಿದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..