ಬೆಂಗಳೂರು –
ರಾಜ್ಯದಲ್ಲಿ ಕೊರೋನಾ ವೈರಸ್ ಓಮಿಕ್ರಾನ್ ದಿನೇದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಇಡೀ ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ಮಾಡಲಾಗಿದ್ದು ಇಂದು ರಾತ್ರಿ 8 ರಿಂದ ಸೋಮ ವಾರ ಬೆಳಗ್ಗೆ 5 ರವರೆಗೆ ಅನ್ವಯವಾಗುತ್ತದೆ.ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಗಳನ್ನು ಹೊರತು ಪಡಿಸಿ ಜನರ ಒಡಾಟವನ್ನು ಕಟ್ಟುನಿಟ್ಟಾಗಿ ನಿಷೇಸಲು ಜಿಲ್ಲಾಡಳಿತಗಳು ಕ್ರಮ ಕೈಗೊಂಡಿವೆ.
ತುರ್ತು,ಅತ್ಯಾವಶ್ಯಕ ಸೇವೆಗಳು ಮತ್ತು ಕೋವಿಡ್ ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿ ಸುವ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು,ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿ ಸುತ್ತವೆ.ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಓಡಾಟಕ್ಕೆ ಅವಕಾಶವಿದೆ.ವಾರಾಂತ್ಯ ಕಫ್ರ್ಯೂ ಅವಧಿಯಲ್ಲಿ ಸಾಮಾನ್ಯ ಜನರಿಗೆ ಬಿಎಂಟಿಸಿ ಬಸ್ ಸೌಲಭ್ಯ ಲಭ್ಯವಿರು ವುದಿಲ್ಲ.ಕೇವಲ ತುರ್ತು ಸಂದರ್ಭದಲ್ಲಿ ಮಾತ್ರ ಬಸ್ಗ್ಳು ಸಂಚಾರ ನಡೆಸಲಿವೆ.ಅಗತ್ಯ ಸೇವೆಗಳನ್ನು ನೀಡುವ ಸಿಬ್ಭಂದಿ ಕಚೇರಿಗೆ ತೆರಳಲು ಮಾತ್ರ ಬಸ್ ಓಡಿಸಲಾಗು ತ್ತದೆ.ಅಗತ್ಯ ಸೇವೆಗಳನ್ನು ಒದಗಿಸುವ ಸಿಬ್ಬಂದಿ ಕಚೇರಿಗೆ ಹೋಗಲು ಶೇ.10ರಷ್ಟು ಬಸ್ ಗಳನ್ನು ಮಾತ್ರ ಓಡಿಸಲಾ ಗುತ್ತದೆ. ಕಂಟೈನ್ಮೆಂಟ್ ಝೋನ್ ಗಳಲ್ಲಿ ಬಸ್ ಸಂಚಾರ ಇರುವುದಿಲ್ಲ.ಅಗತ್ಯ ಸೇವೆಗಳಿಗಾಗಿ ವಾರಾಂತ್ಯ ಕಫ್ರ್ಯೂ ಅವಯಲ್ಲಿ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆ ತನಕ ಮಾತ್ರ ಬಸ್ ಸಂಚಾರ ಇರುತ್ತದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು.ಬೋರ್ಡ್,ಕಾರ್ಪೊರೇಷನ್ ಸಿಬ್ಬಂದಿ ಗಳು, ಪೊಲೀಸ್,ಹೋಂ ಗಾರ್ಡ್,ಸಿವಿಲ್ ಡಿಫೆನ್ಸ್,ಅಗ್ನಿ ಶಾಮಕ ತುರ್ತು ಸೇವೆಗಳ ಸಿಬ್ಬಂದಿ ಬಸ್ ನಲ್ಲಿ ಸಂಚಾರ ನಡೆಸಬಹುದಾಗಿದೆ.ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು,ಸಿಬ್ಬಂದಿ,ಲ್ಯಾಬ್ ಸಿಬ್ಬಂದಿ,ಆಶಾ ಕಾರ್ಯಕರ್ತೆ ಯರು ಇತರ ಸಿಬ್ಬಂದಿಗಳು.ಆಸ್ಪತ್ರೆಗೆ ತೆರಳುವ ರೋಗಿ ಗಳು ಮತ್ತು ಅವರನ್ನು ಚಿಕಿತ್ಸೆ, ಪರೀಕ್ಷೆಗೆ ಕರೆದುಕೊಂಡು ಹೋಗವವರು ಸಂಚಾರ ನಡೆಸಬಹುದು.ಸರ್ಕಾರಿ,ಖಾಸಗಿ ಬ್ಯಾಂಕ್, ವಿಮೆ ಕಂಪನಿಗಳ ಸಿಬ್ಬಂದಿಗಳು, ಅಧಿಕಾರಿಗಳ, ಮುದ್ರಣ ಮತ್ತು ದೃಶ್ಯ ಮಾಧ್ಯಮದಲ್ಲಿ ಕೆಲಸ ಮಾಡುವ ವರು ಸಂಚರಿಸಬಹುದು.ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಬ ಹುದು.ಬಸ್ ದಲ್ಲಿ ಪ್ರಯಾಣಿಸುವ ಎಲ್ಲರೂ ಕಡ್ಡಾಯ ವಾಗಿ ಐಡಿ ಕಾರ್ಡ್ ತೋರಿಸಬೇಕು.ಸಾಮಾನ್ಯ ಜನರಿಗೆ ಬಸ್ ರಲ್ಲಿ ಸಂಚಾರ ನಡೆಸಲು ಅವಕಾಶವಿಲ್ಲ.ಕೋವಿಡ್ ನಿಯಮ ಪಾಲನೆ ಕಡ್ಡಾಯವಾಗಿದ್ದು ಬಸ್ಸಿನ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.ಸಿಬ್ಬಂದಿಗಳು ಸ್ಯಾನಿ ಟೈಸರ್ ಬಳಕೆ ಮಾಡಬೇಕು,ಬಸ್ ನಲ್ಲಿ ಸೀಟು ಇದ್ದರೆ ಮಾತ್ರ ಪ್ರಯಾಣಿಕರನ್ನು ಹತ್ತಿಸಿಕೊಳ್ಳಬೇಕು, ನಿಗದಿಪಡಿ ಸಿದ ಬಸ್ ನಿಲ್ದಾಣಗಳಲ್ಲಿ ಮಾತ್ರ ಬಸ್‌ಗಳನ್ನು ನಿಲ್ಲಿಸ ಬೇಕು ಎಲ್ಲಾ ಪ್ರಯಾಣಿಕರ ಗುರುತಿನ ಚೀಟಿ ಪರಿಶೀಲನೆ ನಡೆಸಿಯೇ ಬಸ್ಗೆಮ ಹತ್ತಿಸಿಕೊಳ್ಳಬೇಕು. ವಾರಾಂತ್ಯದ ಕಫ್ರ್ಯೂ ಅವಧಿಯಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ಇರಲಿದೆ. ಶನಿವಾರ ಮತ್ತು ಭಾನುವಾರ ಬೆಳಗ್ಗೆ 8ರಿಂದ ರಾತ್ರಿ 9ರ ತನಕ ಮಾತ್ರ ಮೆಟ್ರೋ ರೈಲು ಸಂಚರಿಸಲಿದೆ.
ವಾರಾಂತ್ಯ ಕರ್ಫ್ಯೂ ನ ಮಾರ್ಗಸೂಚಿಗಳು
ಪಾರ್ಕ್ ಗಳು ಬಂದ್ – ಎಲ್ಲಾ ಸಾರ್ವಜನಿಕ ಉದ್ಯಾನಗಳು ಬಂದ್ ಆಗಿರುತ್ತವೆ ಮಾಹಿತಿ ತಂತ್ರಜ್ಞಾನ ಉದ್ದಿಮೆಗಳು ಒಳಗೊಂಡಂತೆ ಎಲ್ಲಾ ಉದ್ದಿಮೆಗಳ ಕಾರ್ಯಾಚರಣೆಗೆ ವಾರಾಂತ್ಯದ ಕಫ್ರ್ಯೂ ಇಂದ ವಿನಾಯತಿ ಇದೆ ನೌಕರರು ಆಯಾ ಸಂಘ,ಸಂಸ್ಥೆಗಳು ನೀಡುವ ಅಕೃತ ಗುರುತಿನ ಚೀಟಿಯನ್ನು ಹಾಜರುಪಡಿಸಿ ಸಂಚಾರ ನಡೆಸಬ ಹುದುದು.ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯ ವಿರುವ ರೋಗಿಗಳು ರೋಗಿಗಳನ್ನು ಕರೆದುಕೊಂಡು ಹೋಗುವವರು ಲಸಿಕೆ ಹಾಕಿಸಿಕೊಳ್ಳಲು ಉದ್ದೇಶಿಸಿರುವ ವ್ಯಕ್ತಿಗಳು ದಾಖಲೆ ತೋರಿಸಿ ಸಂಚರಿಸಬಹುದು.
ಬೀದಿಬದಿ ವ್ಯಾಪಾರ- ಹೋಟೆಲ್ಗಿಳಲ್ಲಿ ಪಾರ್ಸಲ್ ಗಳಿಗೆ ಅನುಮತಿ ನೀಡಲಾಗಿದೆ ಬೇಕರಿ, ಆಹಾರ, ದಿನಸಿ, ಹಣ್ಣು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತ್ಗತಳು, ಮಾಂಸ ಮತ್ತು ಮೀನು, ಪಶು ಆಹಾರದ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸಹ ಅನುಮತಿ ನೀಡಲಾಗಿದೆ. ಸಾರ್ವಜ ನಿಕ ವಿತರಣೆಯ ನ್ಯಾಯಬೆಲೆ ಅಂಗಡಿಗಳು ಕಾರ್ಯನಿ ರ್ವಹಿಸಲು ಅನುಮತಿ ಇದೆ.ಜನರು ತಮ್ಮ ಮನೆಯ ಹೊರಗೆ ಓಡಾಡುವುದನ್ನು ಕಡಿಮೆ ಮಾಡುವುದಕ್ಕಾಗಿ 24*7 ಅವಧಿಯಲ್ಲಿ ಸಾಮಗ್ರಿಗಳನ್ನು ಮನೆ ಮನೆಗೆ ವಿತರಿಸಲು ಪ್ರೋತ್ಸಾಹಿಸಬೇಕು.ರೆಸ್ಟೋರೆಂಟ್ ಮತ್ತು ಹೋಟೆಲ್ ಗಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮಾತ್ರ ಅನುಮತಿ ಇದೆ. ರೈಲು,ವಿಮಾನ ಸಂಚಾ ರಕ್ಕೆ ಅನುಮತಿ ನೀಡಲಾಗಿದೆ
ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ಇದೆ. ವಿಮಾನ, ರೈಲು ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ (ಕಂಪನಿಗಳು ನಿರ್ವಹಿ ಸುವ ಕ್ಯಾಬ್ ಗಳು ಸೇರಿದಂತೆ) ಸಂಚಾರಕ್ಕೆ ಅನುಮತಿ ನೀಡಲಾಗಿದೆ.ಆದರೆ ಪ್ರಯಾಣ ದಾಖಲೆ ಅಥವಾ ಟಿಕೆಟ್ ಪ್ರದರ್ಶಿಸಿದ ನಂತರ ಮತ್ತು ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಸಂಚಾರ ನಡೆಸಬೇಕು. ವಿವಾಹ ಸಮಾರಂಭಗಳಿಗೆ 200 ಜನರ ಮಿತಿ ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನೊಂದಿಗೆ ಹೊರಾಂಗಣಗಳಲ್ಲಿ 200 ಜನರು ಮೀರದಂತೆ ಹಾಗೂ ಒಳಾಂಗಣಗಳಲ್ಲಿ 100 ಜನರು ಮೀರದಂತೆ ಮದುವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅವಕಾಶವಿದೆ.ಜನರು ಮಾರ್ಗಸೂಚಿ ಗಳನ್ನು ಪಾಲನೆ ಮಾಡುವ ಜೊತೆಗೆ ಸರ್ಕಾರದ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಗೃಹ ಸಚಿವರ ಎಚ್ಚರಿಕೆ ವಾರಾಂತ್ಯ ಕಫ್ರ್ಯೂ ಮಾರ್ಗಸೂಚಿಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ, ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ.ನಿಯಮ ಉಲ್ಲಂ ಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ