ಹುಬ್ಬಳ್ಳಿ –
ವಿವಿಧೆಡೆ ಮಾಸ್ಕ್ ಧರಿಸದ ತಿರುಗಾಡುತ್ತಿದ್ದ ಜನರಿಗೆ ಕೋವಿಡ್ ತಪಾಸಣೆ ಮಾಡಲಾಗುತ್ತದೆ.ಹೌದು ಹುಬ್ಬಳ್ಳಿ ಧಾರವಾಡ ದಲ್ಲಿ ಈ ಒಂದು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ,ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಈ ಒಂದು ಪರೀಕ್ಷೆಯನ್ನು ಮಾಡಲಾಗುತ್ತಿದೆ. ಹುಬ್ಬಳ್ಳಿ ನಗರದ ವಿವಿಧ ಪ್ರದೇಶಗಳಲ್ಲಿ ಮಾಸ್ಕ್ ಧರಿಸದ
ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ನಡೆಸಲಾಯಿತು.
ನೃಪತುಂಗ ಬೆಟ್ಟ, ಸಿಬಿಟಿ, ಹೊಸ ಬಸ್ ನಿಲ್ದಾಣ, ಜನತಾ ಬಜಾರ್, ದುರ್ಗದಬೈಲ್ ಮತ್ತಿತರ ಪ್ರದೇಶಗಳಲ್ಲಿ ಮಾಸ್ಕ್ ಧರಿಸದ ಸುಮಾರು ಒಂದು ಸಾವಿರಕ್ಕೂ ಅಧಿಕ ಜನರನ್ನೂ ಕೋವಿಡ್ ತಪಾಸಣೆ ಮಾಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಡಾ.ಆರ್ ಹೆಚ್ ಹಿತ್ತಲಮನಿ, ಡಾ.ಪ್ರಭು ಬಿರಾದಾರ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.