ರಾಜ್ಯದ ಸರ್ಕಾರಿ ನೌಕರರಿಗೆ ಎಚ್ಚರಿಕೆ ಸಂದೇಶ ನೀಡಿದ CS – ಯಾತಕ್ಕಾಗಿ ಎಚ್ಚರಿಕೆ ನೀಡಿದ್ದು ಗೊತ್ತಾ ಹುಷಾರಾಗಿರಿ ಗಮನಕ್ಕೆ ಇರಲಿ…..

Suddi Sante Desk
ರಾಜ್ಯದ ಸರ್ಕಾರಿ ನೌಕರರಿಗೆ ಎಚ್ಚರಿಕೆ ಸಂದೇಶ ನೀಡಿದ CS – ಯಾತಕ್ಕಾಗಿ ಎಚ್ಚರಿಕೆ ನೀಡಿದ್ದು ಗೊತ್ತಾ ಹುಷಾರಾಗಿರಿ ಗಮನಕ್ಕೆ ಇರಲಿ…..

ಬೆಂಗಳೂರು

ಸರ್ಕಾರಿ ನೌಕರರು ಸರ್ಕಾರಿ ಕೆಲಸವಲ್ಲದ ರಾಜಕೀಯ ಪಕ್ಷಗಳ ಚುನಾವಣಾ ಕಾರ್ಯ ಗಳಲ್ಲಿ ತೊಡಗಿಕೊಂಡಿರುವುದು ಕಂಡುಬಂದಲ್ಲಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕಾರಣ ಸಮಾಜ ಕಲ್ಯಾಣ ಇಲಾಖೆಯ ಸೇಡಂ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ವಸತಿ ನಿಲಯದ ವಾರ್ಡನ್ ಯಶೋಧಮ್ಮ ಅವರನ್ನು ತಕ್ಷಣ. ದಿಂದ ಜಾರಿಗೆ ಬರುವಂತೆ ಅಮಾನತ್ತು ಮಾಡಿ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರಿಗೆ ಸೂಚನೆ ನೀಡಲಾಗಿದೆ

ಸೇಡಂ ತಾಲೂಕಿನ ಮಳಖೇಡ್ ಆದಿತ್ಯಾ ಕಾಲೋನಿಯಲ್ಲಿ ಕಳೆದ ಮಾರ್ಚ್ 21 ರಂದು ರಾಜಕೀಯ ಪಕ್ಷದ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಭಾವಚಿತ್ರ ಸಾಮಾಜಿಕ ಜಾಲ ತಾಣದಲ್ಲಿ ಪ್ರಸಾರವಾಗಿದ್ದು ಸರಕಾರಿ ನೌಕರರ ತರವಲ್ಲದ ರೀತಿಯಲ್ಲಿ ನಡೆದುಕೊಂಡು ಸರಕಾರಿ ಆದೇಶವನ್ನು ಉಲ್ಲಂಘಿಸಿ ಕೆಲಸದಲ್ಲಿ ನಿರ್ಲಕ್ಷ್ಯ ತನ ಹಾಗೂ ಬೇಜವಾಬ್ದಾರಿತನ ತೋರಿಸಿರು ವುದು ಸ್ಪಷ್ಟವಾಗಿ ಕಂಡುಬಂದಿದೆ.

ಚುನಾವಣಾ ಚಟುವಟಿಕೆಯಲ್ಲಿ ಭಾಗಿಯಾಗಿರು ವುದು ಸ್ಪಷ್ಟವಾಗಿದೆ ಎಂದು ಸೇಡಂ ವಿಧಾನಸಭಾ ಮತಕ್ಷೇತ್ರದ‌ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರ ವರದಿ ಹಿನ್ನೆಲೆಯಲ್ಲಿ ಯಶೋದಮ್ಮ ಅವರನ್ನು ಪ್ರಜಾಪ್ರತಿನಿಧಿ ಕಾಯ್ದೆ-1951, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು-1957 ಹಾಗೂ ಕರ್ನಾಟಕ ರಾಜ್ಯ ನಾಗರೀಕ ಸೇವಾ (ನಡತೆ) ನಿಯಮಗಳು-2021 ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸದರಿ ಯವರನ್ನು ಸರ್ಕಾರಿ ಸೇವೆಯಿಂದ ಅಮಾನತ್ತು ಗೊಳಿಸಿ ಆದೇಶಿಸಲಾಗಿದೆ ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.