ದಾಂಡೇಲಿ –
ಬೈಕ್ ಸವಾರರಿಗೆ ಕಡ್ಡಾಯ ಹೆಲ್ಮೆಟ್ ವಿಚಾರ ಕುರಿತಂತೆ ನಮ್ಮ ಪೊಲೀಸರು ಎಷ್ಟೇ ಜಾಗೃತಿ ಅಭಿಯಾನ ಮಾಡ್ತಾ ಇದ್ದಾರೆ. ಇವೆಲ್ಲದರ ನಡುವ ನಮ್ಮ ದಾಂಡೇಲಿ ಪೊಲೀಸರು ವಿಶೇಷವಾಗಿ ಬೈಕ್ ಸವಾರರಿಗೆ ಜಾಗೃತಿಯನ್ನು ಮಾಡಿದ್ರು. ಹೌದು ದಾಂಡೇಲಿ ನಗರ ಹಾಗೂ ಗ್ರಾಮೀಣ ಠಾಣೆಯ ನೇತೃತ್ವದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆಯಿತು.ಡಿ.ವೈ.ಎಸ್.ಪಿ. ಶಿವಾನಂದ ಚಲವಾದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೇ ಚಲಾಯಿಸುತ್ತಿದ್ದ ವಾಹನ ಸವಾರರಿಗೆ ಗುಲಾಬಿ ಹೂ ನೀಡಿದರು.

ಡಿ.ವೈ.ಎಸ್.ಪಿ. ಶಿವಾನಂದ ಚಲವಾದಿಯವರು ಹೆಲ್ಮೆಟ್ ಧರಿಸದೇ ವಾಹನ ಸವಾರಿ ಮಾಡುವುದರಿಂದ ಆಗುವ ಅಪಾಯಗಳ ಬಗ್ಗೆ ಮನವರಿಕೆ ಮಾಡಿದರು. ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಹಾಗೂ ಸಾರಿಗೆ ನಿಯಮ ಪಾಲಿಸುವಂತೆ ಮನವಿ ಮಾಡಿದರು.ನಂತರ ನಗರದ ಮುಖ್ಯ ರಸ್ತೆಯಲ್ಲಿ ರಸ್ತೆ ಸುರಕ್ಷಾ ಸಪ್ತಾಹದ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಸಿ.ಪಿ.ಐ. ಪ್ರಭು ಗಂಗೇನಳ್ಳಿ , ನಗರ ಠಾಣೆಯ ಪಿ.ಎಸ್.ಐ ಯಲ್ಲಪ್ಪ ಎಸ್. ಗ್ರಾಮೀಣ ಠಾಣೆಯ ಪಿ.ಎಸ್.ಐ. ಹನಮಂತ ಬಿರಾದರ, ಮಾದೇವಿ ನಾಯ್ಕವಾಡಿ ಸೇರಿದಂತೆ ಗ್ರಾಮೀಣ ಮತ್ತು ನಗರದ ಠಾಣೆಗಳ ವೃತ್ತ ನಿರೀಕ್ಷಕರ ಡಿವೈಎಸ್ಪಿ ಕಚೇರಿಗಳ ಸಿಬ್ಬಂದ್ದಿಗಳು ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.