ಉಡುಪಿ –
ಮೈ ತುಂಬಿ ಹರಿಯುತ್ತಿರುವ ಸೌಪರ್ಣಿಕೆಯನ್ನು ಒಂದು ಭಾಗದ ಕುರು ದ್ವೀಪದ ಇಬ್ಬರು ವಿದ್ಯಾರ್ಥಿ ನಿಯನ್ನು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ದೋಣಿಯ ಮೂಲಕ ನದಿಯನ್ನು ದಾಟಿಸಿ
ಡಿಡಿಪಿಐ ಹಾಗೂ ಬೈಂದೂರು ತಹಶೀಲ್ದಾರ್ ಶೋಭಾ ಲಕ್ಷ್ಮಿಯವರು ಪರೀಕ್ಷಾ ಕೇಂದ್ರಕ್ಕೆ ಕರೆ ತಂದಿದ್ದಾರೆ.
ಬೈಂದೂರು ವಲಯದ ಮರವಂತೆ ಸರಕಾರಿ ಪ್ರೌಢ ಶಾಲೆಯ ಶಿಲ್ಪಾ ಹಾಗೂ ಸಂಜನಾ ಅವರ ಮನೆ ಕುರು ದ್ವೀಪದಲ್ಲಿದ್ದು ಇಲ್ಲಿಂದ ಊರಿಂದಾಚೆಗೆ ಬರಬೇಕೆಂದರೆ ಮರವಂತೆ, ಇಲ್ಲವಾದರೆ ನಾಡಾ ಮೂಲಕ ಸಾಗಿ ಬರಬೇಕಾಗುತ್ತದೆ.
ದೋಣಿ ಮೂಲಕ ಸಾಗಿ ಬಂದರೂ ಇಲ್ಲಿನ ವಿದ್ಯಾರ್ಥಿಗಳು ಬಯಲು ದಾರಿಯಲ್ಲಿ ಮತ್ತೆ ಅರ್ಧ ಕಿ.ಮೀ ಗೂ ಹೆಚ್ಚು ನಡೆದುಕೊಂಡೆ ಕ್ರಮಿಸಿಬೇಕು.
ನಿರಂತರ ಸುರಿದ ಭಾರೀ ಮಳೆಯಿಂದಾಗಿ ಪರೀಕ್ಷೆ ಬರೆಯಲು ಬರಲು ಈ ವಿದ್ಯಾರ್ಥಿನಿಯರಿಗೆ ತುಂಬಾ ಸಮಸ್ಯೆಯಾಗಿತ್ತು.ಇದು ಪರೀಕ್ಷೆಯ ನೋಡಲ್ ಅಧಿಕಾರಿ ಕರುಣಾಕರ ಶೆಟ್ಟಿ ಅವರ ಗಮನಕ್ಕೆ ಬಂದಿದ್ದು ಶಿಕ್ಷಣ ಇಲಾಖೆ ಮಕ್ಕಳನ್ನು ಕರೆತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ.ಇದಕ್ಕಾಗಿಯೇ ಇಬ್ಬರು ಶಿಕ್ಷಕರನ್ನು ನಿಯೋಜಿಸಿ ಮಕ್ಕಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿದೆ.
ವಿಶೇಷ ಕಾಳಜಿಯೊಂದಿಗೆ ಖುದ್ದು ಡಿಡಿಪಿಐ ಎಚ್.ಎನ್ ನಾಗೂರ ಹಾಗೂ ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮೀ ಸ್ವತಃ ದೋಣಿ ಮೇಲೇರಿ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ.ಡಿಡಿಪಿಐ ಹಾಗೂ ಬೈಂದೂರು ತಹಸೀಲ್ದಾರ್ ಮರವಂತೆ ರಾಷ್ಟ್ರೀಯ ಹೆದ್ದಾರಿಯಿಂದ ಅರ್ಧ ಕಿ.ಮೀ ಬಯಲು ದಾರಿ ಯಲ್ಲಿ ನಡೆದು ಆ ಬಳಿಕ ದೋಣಿ ಮೂಲಕ ಕುರುವಿಗೆ ಪ್ರಯಾಣ ಬೆಳೆಸಿ ಮತ್ತೆ ಅದೇ ದೋಣಿಯಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಬಿಟ್ಟು ಗಮನ ಸೆಳೆದಿದ್ದಾರೆ.
ಮಕ್ಕಳ ಬಗೆಗಿನ ಶಿಕ್ಷಣ ಇಲಾಖೆಯ ಈ ಕಾಳಜಿಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.