ಕೋಲಾರ –
ಮುಸ್ಲಿಂ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ನಮಾಜ್ ಮಾಡಲು ಅವಕಾಶ ನೀಡಿದ ಶಾಲೆಯೊಂದರ ವಿರುದ್ಧ ಕೋಲಾರ ಜಿಲ್ಲಾಧಿಕಾರಿ ಉಮೇಶ್ ಕುಮಾರ್ ತನಿಖೆಗೆ ಆದೇಶಿಸಿದ್ದಾರೆ.ಹೌದು ಈ ಸಂಬಂಧ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿರುವ ಕುಮಾರ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಅವರಿಂದ ವಿವರವಾದ ವರದಿ ಕೇಳಿದ್ದಾರೆ.ಮುಳಬಾಗಿಲು ನಗರದ ಸೋಮೇಶ್ವರ ಪಾಳ್ಯದ ಶ್ರೀಬಳೆಚಂಗಪ್ಪ ಸರ್ಕಾರಿ ಕನ್ನಡ ಹಿರಿಯ ಪ್ರಾಥ ಮಿಕ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಶುಕ್ರವಾರ ನಮಾಜ್ ಮಾಡಲು ಕೊಠಡಿಯೊಂದನ್ನು ನೀಡಿದ ಮುಖ್ಯ ಶಿಕ್ಷಕಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಶಾಲೆ ಮುಂಭಾಗದಲ್ಲಿ ನಿನ್ನೆ ಪ್ರತಿಭಟನೆ ನಡೆಸಿದರು.ಇದೇ ವೇಳೆ ಡಿವೈಎಸ್ಪಿ ಗಿರಿರವರ ಮೂಲಕ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಶಾಲೆಯ ಕೊಠಡಿಯೊಂದರಲ್ಲಿ ಮಕ್ಕಳಿಗೆ ನಮಾಜ್ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿಯೂ ವಿಡಿಯೋ ವೈರಲ್ ಆಗಿದೆ.ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಮೇಶ್ ಕುಮಾರ್ ಅವರು ಈ ಕುರಿತು ತನಿಖೆಗೆ ಆದೇಶಿಸಿದ್ದು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಶಾಲೆಗೆ ಭೇಟಿ ನೀಡಿ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಡಿಡಿಪಿಐ ರೇವಣ ಸಿದ್ದಪ್ಪ ಅವರಿಗೆ ಸೂಚಿಸಿದ್ದೇನೆಂದು ಕುಮಾರ್ ಅವರು ಹೇಳಿ ದ್ದಾರೆ.ವರದಿ ಆಧರಿಸಿ ಜಿಲ್ಲಾಧಿಕಾರಿಗಳು ಮುಂದಿನ ವಿಚಾರಣೆ ನಡೆಸಲಿದ್ದಾರೆ.ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಲು ಶಾಲೆಯಲ್ಲಿ ಪ್ರಾರ್ಥನೆಗೆ ಮುಖ್ಯೋಪಾಧ್ಯಾಯಿನಿ ಅನುಮತಿ ನೀಡಿದ್ದಾರಂತೆ.ಹಿಂದೂ ಸಂಘಟನೆಗಳ ಸದಸ್ಯರು ಶಾಲೆಯ ಬಳಿ ಪ್ರತಿಭಟನೆ ನಡೆಸಿದಾಗ ಈ ನಿರ್ಧಾರವು ಉದ್ದೇಶಪೂರ್ವಕವಲ್ಲ ಎಂದು ಮುಖ್ಯಶಿಕ್ಷಕಿ ಹೇಳಿದ್ದು ಶಿಕ್ಷಕಿ ಹೇಳಿಕೆ ಬೆನ್ನಲ್ಲೇ ಪ್ರತಿಭಟನೆ ಹಿಂಪಡೆಯ ಲಾಗಿತ್ತು ಈಗ ಮತ್ತೆ ವಿವಾದ ಹುಟ್ಟಿಕೊಂಡಿದ್ದು ಏನೇನಾ ಗುತ್ತದೆ ಎಂಬುದನ್ನು ಕಾದು ನೋಡಬೇಕು