ಬೆಂಗಳೂರು –
ಉಕ್ರೇನ್ ಮತ್ತು ರಷ್ಯಾ ಯುದ್ಧದಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ 21 ದಿನಗಳ ನಂತರ ತಾಯ್ನಾಡಿಗೆ ಆಗಮಿಸಿತು.ಹೌದು ದೇವನಹಳ್ಳಿಯ ವಿಮಾನ ನಿಲ್ದಾಣಕ್ಕೆ ಮೃತ ನವೀನ್ ಮೃತದೇಹ ಆಗಮಿ ಸಿತು ಉಕ್ರೇನ್ ಮತ್ತು ರಷ್ಯಾ ಯುದ್ಧದಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ 21 ದಿನಗಳ ನಂತರ ತಾಯ್ನಾಡಿಗೆ ಬಂದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ವಿಭಾಗದಲ್ಲಿ ಪಾರ್ಥಿವ ಶರೀರವನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾರ್ಥಿಯ ಕುಟುಂಬಕ್ಕೆ ಹಸ್ತಾಂತರಿಸಿದರು.ಸಿಎಂರಿಂದ ಕುಟುಂಬಕ್ಕೆ ನವೀನ್ ಪಾರ್ಥಿವ ಶರೀರ ಹಸ್ತಾಂತರ ದುಬೈ ಮೂಲಕ ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ನವೀನ್ ಪಾರ್ಥಿವ ಶರೀರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು.ಮುಖ್ಯಮಂತ್ರಿ ಬಸವ ರಾಜು ಬೊಮ್ಮಾಯಿ,ಸಂಸದ ಶಿವಕುಮಾರ್ ಉದಾಸಿ,
ಸಚಿವ ಡಾ.ಕೆ.ಸುಧಾಕರ್,ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅಂತಿಮ ದರ್ಶನ ಪಡೆದರು.ಮೃತ ನವೀನ್ ಅಣ್ಣ ಹರ್ಷ ಸೇರಿದಂತೆ ಗ್ರಾಮಸ್ಥರು ಪಾರ್ಥಿವ ಶರೀರ ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂ ದ ತೆಗೆದುಕೊಂಡು ಆಂಬ್ಯುಲೆನ್ಸ್ ನಲ್ಲಿ ಹಾವೇರಿ ಜಿಲ್ಲೆಯ ಸ್ವಗ್ರಾಮಕ್ಕೆ ತೆರಳಿದರು.