ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಹೃದಯಾ ಘಾತದಿಂದ ಸಾವು – ಯುವ ಜನಾಂಗದಲ್ಲಿ ಹೆಚ್ಚಾಗುತ್ತಿದೆ ಹೃದಯಾಘಾತದ ಕಾಯಿಲೆ ಹೌದು ಪರೀಕ್ಷೆ ಬರೆಯುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿ ಯೊರ್ವನಿಗೆ ಹೃದಯಾಘಾತ ಸಂಭವಿಸಿ ಸಾವಿಗೀಡಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಹೌದು ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ ಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದು ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ನಡೆದಿದೆ. 9 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದ ಬಾಲಕ ಅರ್ಧ ವಾರ್ಷಿಕ ಪರೀಕ್ಷೆ ಬರೆಯಲು ಶಾಲೆಗೆ ಹೋದ ವೇಳೆ ಘಟನೆ ಸಂಭವಿಸಿತ್ತು
ರಾಹುಲ್ ಕೋಲಕಾರ (15) ಮೃತ ವಿದ್ಯಾರ್ಥಿ ಯಾಗಿದ್ದು ತೀವ್ರವಾಗಿ ಎದೆ ನೋವು ಕಾಣಿಸಿ ಕೊಂಡಾಗ ಶಿಕ್ಷಕರು ಹಾಗೂ ಇತರ ಶಾಲಾ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.
ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ…..