ಕುಂದಗೋಳ –
ಸಾಲಬಾಧೆ ತಾಳಲಾರದೇ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಚಿಕ್ಕನರ್ತಿ ಗ್ರಾಮದ ಬಸವಣ್ಣಪ್ಪ ದೊಳ್ಳನವರ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾರೆ.

ಯರಗಪ್ಪಿ ಬ್ಯಾಂಕ್ ನಲ್ಲಿ 1 ಲಕ್ಷ ರೂಪಾಯಿ ಹಾಗೂ ಕೈಗಡ ರೂಪದಲ್ಲಿ 3 ಲಕ್ಷ ರೂಪಾಯಿ ಸಾಲ ಮಾಡಿದ್ದನಂತೆ. ತಡರಾತ್ರಿ ಮನೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ವಿಷಯ ತಿಳಿದ ಕುಂದಗೋಳ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು. ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.