ಸಾಲಬಾದೆ ರೈತ ಆತ್ಮಹತ್ಯೆ – 15 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ರೈತ

Suddi Sante Desk

ಕೋಲಾರ –

ಸಾಲಬಾದೆ ತಾಳಲಾರದೆ ರೈತನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ
ಕೋಲಾರದಲ್ಲಿ ಈ ಒಂದು ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆವನಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ‌.
ಆವನಿ ಗ್ರಾಮದ ಪುರುಷೋತ್ತಮ್ (೩೮) ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾನೆ.

ಗ್ರಾಮೀಣ ಬ್ಯಾಂಕ್ ಸೇರಿದಂತೆ ಹಲವೆಡೆ ಒಟ್ಟು 15 ಲಕ್ಷ ರೂಪಾಯಿ ಸಾಲ‌ ಮಾಡಿಕೊಂಡಿದ್ದನು. ಪುರುಷೋತ್ತಮ್ ಇಂದು ಸಂಜೆ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.