ಗದಗ –
ಅಪಘಾತದಿಂದ ಮೃತಪಟ್ಟಿದ್ದ ಬಾಲಕನ ಕುಟುಂಬ ಕ್ಕೆ ಸಂಬಂಧಿಗಳಿಗೆ ಪರಿಹಾರ ಹಣ ನೀಡುವಲ್ಲಿ ವಿಳಂಬ ಮಾಡಿದ ಕಾರಣ ವಾಯುವ್ಯ ಸಾರಿಗೆ ಕಚೇರಿಯ ವಸ್ತುಗಳನ್ನು ಜಪ್ತಿ ಮಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ.

ನಗರದ ಮುಳಗುಂದ ನಾಕಾ ಬಳಿ ಇರುವ ವಾಯು ವ್ಯ ಸಾರಿಗೆ ಕಚೇರಿಯಲ್ಲಿನ ಕಂಪ್ಯೂಟರ್, ಮಾನಿಟ ರ್, ಸಿಪಿಯು ಸೇರಿದಂತೆ ಹಲವಾರು ವಸ್ತುಗಳನ್ನು, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಪಾಟೀಲ್ ಅವರ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ.

2009 ರಲ್ಲಿ ಗದಗನ ದಂಡಿನ ದುರ್ಗಮ್ಮ ದೇವಸ್ಥಾ ನದ ಬಳಿ ಅಪಘಾತ ನಡೆದು, ಈ ಘಟನೆಯಲ್ಲಿ ಬೆಟಗೇರಿ ನಿವಾಸಿ ಸಂಕಪ್ಪ ಶಿವಾನಂದ ಆಲೂರ (೧೫) ಸ್ಥಳದಲ್ಲಿಯೇ ಮೃತಪಟ್ಟಿದ್ದ. ಹುಬ್ಬಳ್ಳಿ- ಬಾಗ ಲಕೋಟೆ ಬಸ್ ಹರಿದು ಸ್ಥಳದಲ್ಲಿ ಸಂಕಪ್ಪನ ಸಾವು ಸಂಭವಿಸಿತ್ತು.ಪರಿಹಾರಕ್ಕೆ ಆಗ್ರಹಿಸಿ 2009 ರಲ್ಲಿ ಮೃತ ಬಾಲಕನ ಸಂಬಂಧಿಗಳು ನ್ಯಾಯಾಲಯ ದ ಮೊರೆಹೋಗಿದ್ದರು.

ಪ್ರಕರಣದ ಕುರಿತು ಆದೇಶ ನೀಡಿದ್ದ ನ್ಯಾಯಾಲಯ ಗದಗ ಘಟಕದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಸಾರಿಗೆ ಇಲಾಖೆ ಯವರು 2014 ಹೈಕೋರ್ಟ್ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಒಟ್ಟು 8 ಲಕ್ಷ ಪರಿಹಾರ ನೀಡುವಂತೆ ಆದೇಶ ನೀಡಿತ್ತು. ಅದರಲ್ಲಿ 5 ಲಕ್ಷ ಪರಿಹಾರ ನೀಡಲಾಗಿತ್ತು.ಉಳಿದ 3 ಲಕ್ಷ 16 ಸಾವಿರ ಪರಿಹಾರ ನೀಡದ ಕಾರಣ ಈಗ ಇಲಾಖೆಯ ವಸ್ತುಗಳ ಜಪ್ತಿಗೆ ಅದೇಶ ನೀಡಿಲಾಗಿ ದ್ದು,ಅರ್ಜಿದಾರರ ಪರ ವಕೀಲರಾದ ಅಶೋಕ ಹೊಸೂರ ನೇತೃತ್ವದಲ್ಲಿ ಜಪ್ತಿ ಕಾರ್ಯ ನಡೆಯಿತು