ಹೊಸಪೇಟೆ (ವಿಜಯನಗರ) –
ಏಳನೇ ವೇತನ ಆಯೋಗ ರಚಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದವರು ವಿಜಯನಗರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ತಹಶಿಲ್ದಾರ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಯವರಿಗೆ ಕಳಿಸಿದರು.ತಹಶೀಲ್ದಾರ್‌ಗೆ ಸಲ್ಲಿಸಿದರು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ತಕ್ಕಂತೆ ವೇತನ ಹಾಗೂ ಇತರೆ ಸೌಲಭ್ಯಗಳನ್ನು ನೀಡಬೇಕು.ನೂತನ ಪಿಂಚಣಿ ಯೋಜನೆಯನ್ನು ಕೈಬಿಟ್ಟು ನಿಶ್ಚಿತ ಪಿಂಚಣಿ ಮರು ಸ್ಥಾಪಿಸಬೇಕು.ರಾಜ್ಯದಲ್ಲಿ ಖಾಲಿ ಯಿರುವ 2.80 ಲಕ್ಷ ಹುದ್ದೆಗಳನ್ನು ತುಂಬಬೇಕು.ಆಡಳಿತ ಸುಧಾರಣಾ ಆಯೋಗವು ನೌಕರರ ವಿರೋಧಿ ಶಿಫಾರಸು ಗಳನ್ನು ವಿರೋಧಿಸಬೇಕು ಎಂದು ಆಗ್ರಹಿಸಿದರು ಈ ಒಂದು ಪ್ರತಿಭಟನೆಯಲ್ಲಿ ವಿವಿಧ ಇಲಾಖೆಯ ನೌಕರರು ಪಾಲ್ಗೊಂಡಿದ್ದರು.