ಚಿಕ್ಕಮಗಳೂರು –
ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರಿನ ಕಡೂರಿನ ಗಣಸಾಗರ ಬಳಿ ಈ ಒಂದು ಘಟನೆ ನಡೆದಿದೆ.ಹುಬ್ಬಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಜನ ಶತಾಬ್ಧಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ರಾತ್ರಿ ತೋಟದ ಮನೆಯಿಂದ ಒಬ್ಬರೇ ಹೊರಟವರು ರಾತ್ರಿ ಎಷ್ಟೋತ್ತಾದರೂ ವಾಪಸ್ ಮನೆಗೆ ಮರಳಲಿಲ್ಲ. ಪೋನ್ ರಿಂಗ್ ಆಗುತ್ತಿದ್ದರೂ ರಿಸೀವ್ ಆಗುತ್ತಿರಲಿಲ್ಲ. ಅನುಮಾನಗೊಂಡು ಹುಡುಕಿದಾಗ ಅವರು ರೈಲಿಗೆ ಸಿಕ್ಕಿ ಸಾವನ್ನಪ್ಪಿರೋದು ತಿಳಿದು ಬಂದಿದೆ.

ರೈಲಿನ ರಭಸಕ್ಕೆ ದೇಹ ಎರಡು ತುಂಡಾಗಿ ಎರಡು ಕಡೆ ಬಿದ್ದಿತ್ತು. ಗನ್ ಮ್ಯಾನ್ ತಲೆ ಗುರುತು ಹಿಡಿದು ಧರ್ಮೇಗೌಡರದ್ದೇ ಅಂತ ಖಚಿತಪಡಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸದ್ಯ ಇದೊಂದು ಆತ್ಮಹತ್ಯೆ ಎನ್ನಲಾಗಿದೆ. ಆದರೆ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ,ಶಾಸಕ ಸಿ.ಟಿ.ರವಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಜೆಡಿಎಸ್ ಮುಖಂಡ ದೇವೇಗೌಡ ಹಾಗೂ ಕುಮಾರಸ್ವಾಮಿ ಧರ್ಮೇಗೌಡ ಅಂತಿಮ ದರ್ಶನಕ್ಕೆ ಚಿಕ್ಕಮಗಳೂರಿಗೆ ತೆರಳುವ ಸಾಧ್ಯತೆ ಇದೆ.1955 ರ ಡಿಸೆಂಬರ್ 16 ರಂದು ಧರ್ಮೇಗೌಡರ ಜನನವಾಗಿತ್ತು. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ಜೆಡಿಎಸ್ ಪಕ್ಷದಲ್ಲಿ ಸಕ್ರಿಯ ನಾಯಕರಾಗಿದ್ದರು .ಸಧ್ಯ ಆತ್ಮಹತ್ಯೆಗೆ ಶರಣಾಗಿದ್ದು ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದ್ದು ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.